ನನ್ನನ್ನು ಜೈಲ್‌ಗೆ ಕಳುಹಿಸಲು ಬಿಜೆಪಿ ಕೆಟ್ಟದಾರಿ ಹಿಡಿಯುತ್ತಿದೆ: ಉದ್ಧವ್ ಠಾಕ್ರೆ
ಮುಂಬೈ: ನನ್ನನ್ನು ಜೈಲಿಗೆ ಕಳುಹಿಸಲು ಬಿಜೆಪಿ ಕೆಟ್ಟದಾರಿ ಹಿಡಿಯುತ್ತಿದೆ ಎಂದು ಬಿಜೆಪಿ ವಿರುದ್ಧ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಾಗ್ದಾಳಿ ನಡೆಸಿದ್ದಾರೆ.
ಮೂರು ದಿನಗಳ ನಂತರ ಠಾಕ್ರೆ ಅವರ ಸೋದರಮಾವ ಮನಿ ಲಾಂಡರಿಂಗ್ ಅವರ ಮೇಲೆ ದಾಳಿ ಮಾಡಿದ ನಂತರ, ಅವರ ಆಸ್ತಿಯಲ್ಲಿ 6.45 ಕೋಟಿಯನ್ನು ಸ್ಥಗಿತಗೊಳಿಸಲಾಗಿದೆ. ಈ ಕುರಿತು ವಿಧಾನಸಭೆಯಲ್ಲಿ ಪ್ರತಿಕ್ರಿಯಿಸಿದ ಅವರು, ಈ ಪ್ರಕರಣದಲ್ಲಿ ಬಿಜೆಪಿ ನನ್ನನ್ನು ದೋಷಿಯನ್ನಾಗಿ ಮಾಡಲು ತುಂಬಾ ಪ್ರಯತ್ನ ಪಡುತ್ತಿದೆ. ಕೇಂದ್ರವು ಜಾರಿ ನಿರ್ದೇಶನಾಲಯದ ಮೂಲಕ ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಕಿಡಿಕಾರಿದರು.
ಅಧಿಕಾರಕ್ಕೆ ಬರಬೇಕಾದರೆ ಅಧಿಕಾರಕ್ಕೆ ಬನ್ನಿ. ಆದರೆ ಅಧಿಕಾರಕ್ಕೆ ಬರಲು ಇಷ್ಟೆಲ್ಲಾ ಕೆಟ್ಟ ಕೆಲಸಗಳನ್ನು ಮಾಡಬೇಡಿ. ನಮ್ಮ ಮತ್ತು ಬೇರೆ ಕುಟುಂಬ ಸದಸ್ಯರಿಗೆ ಕಿರುಕುಳ ನೀಡಬೇಡಿ. ನಿಮ್ಮ ಕುಟುಂಬದ ಸದಸ್ಯರಿಗೆ ನಾವು ಯಾವತ್ತೂ ತೊಂದರೆ ಕೊಟ್ಟಿಲ್ಲ ಎಂದು ಅವರು ಹೇಳಿದರು.
ಉದ್ಧವ್ ಠಾಕ್ರೆ ಅವರ ಸೋದರ ಮಾವನ ಆಸ್ತಿಯನ್ನು ವಶಪಡಿಸಿಕೊಂಡ ಎರಡು ವಾರಗಳ ನಂತರ, ಆದಾಯ ತೆರಿಗೆ ಇಲಾಖೆಯು ಠಾಕ್ರೆ ಅವರ ಮಗ ಆದಿತ್ಯ ಠಾಕ್ರೆ ಮತ್ತು ಸಹೋದ್ಯೋಗಿ ಅನಿಲ್ ಪರಬ್ ಅವರ ನಿಕಟವರ್ತಿಗಳ ಮೇಲೆ ದಾಳಿ ನಡೆಸಿದರು. ಈ ಹಿನ್ನೆಲೆ ಕೇಂದ್ರ ಬೇಕೆಂದು ಈ ರೀತಿ ಮಾಡುತ್ತಿದೆ ಎಂದು ಅವರು ಆಕ್ರೋಶ ಹೊರಹಾಕಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಚಾಮುಂಡಿ ಬೆಟ್ಟದಲ್ಲೂ ಮುಸ್ಲಿಂ ವ್ಯಾಪಾರಿಗಳ ಅಂಗಡಿ ತೆರವಿಗೆ ವಿಹೆಚ್‌ಪಿ ಒತ್ತಾಯ
ಸ್ವಾಮೀಜಿಗಳಿಗೆ ಅವಮಾನಿಸಿಲ್ಲ, ನನ್ನ ಹೇಳಿಕೆ ತಿರುಚಲಾಗಿದೆ: ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಮಲಯಾಳಂ ನಟ ಸುರೇಶ್ ಗೋಪಿಯ ವಿಚಿತ್ರ ಗಡ್ಡ ನೋಡಿ ವೆಂಕಯ್ಯ ನಾಯ್ಡು ಕೇಳಿದ್ದೇನು? | ವಿಡಿಯೋ ವೈರಲ್