ನಾನು ಹಿಜಾಬ್ ಬಗ್ಗೆ ಮಾತನಾಡ್ತೀನಿ: ಡಿ.ಕೆ.ಶಿವಕುಮಾರ್ ಸೂಚನೆ ತಿರಸ್ಕರಿಸಿದ ಜಮೀರ್

ಬೆಂಗಳೂರು: ಹಿಜಾಬ್ ಬಗ್ಗೆ ಯಾರೂ ಯಾವುದೇ ಹೇಳಿಕೆ ನೀಡಬಾರದು ಎನ್ನುವ ಡಿ.ಕೆ.ಶಿವಕುಮಾರ್ ಅವರ ಸೂಚನೆಯನ್ನು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ತಿರಸ್ಕರಿಸಿದರು.
ಹಿಜಾಬ್ ವಿಚಾರವಾಗಿ ಜಮೀರ್ ಅಹ್ಮದ್ ಅವರು ನೀಡಿರುವ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಜಮೀರ್ ಅಹ್ಮದ್, ನಾನೇಕೆ ನನ್ನ ಹೇಳಿಕೆ ಹಿಂಪಡೆಯಬೇಕು? ಹಿಂಪಡೆಯುವಂತಹ ಹೇಳಿಕೆ ನಾನು ಕೊಟ್ಟಿಲ್ಲ ಎಂದು ಅವರು ಹೇಳಿದರು.
ಹಿಜಾಬ್ ಬಗ್ಗೆ ಯಾರೂ ಏನೂ ಮಾತನಾಡಬಾರದು ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ ಎಂದು ಪತ್ರಕರ್ತರು ಮರು ಪ್ರಶ್ನಿಸಿದಾಗ, “ನಾನು ಹಿಜಾಬ್ ಬಗ್ಗೆ ಮಾತನಾಡ್ತೀನಿ” ಎಂದು ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಫೆ. 17ರಂದು ಹಾರಿಹಿತ್ಲು, ರೆಂಜಾಳ ಶ್ರೀ ಸತ್ಯಸಾರಮಾನಿ ದೈವಸ್ಥಾನದ ವಾರ್ಷಿಕ ನೇಮೋತ್ಸವ