ಹೊಳೆಗೆ ಬಿದ್ದು ನಾಪತ್ತೆ ಪ್ರಕರಣ: ನಾಪತ್ತೆಯಾದ ಯುವಕನ ಬಗ್ಗೆ ದೂರು ದಾಖಲು
ಕಾಣಿಯೂರು: ಹೊಳೆಗೆ ಬಿದ್ದು ಇಬ್ಬರು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಮುಡ್ನೂರು ಗ್ರಾಮದ ಕುಂಡಡ್ಕ ನಿವಾಸಿ ಧನುಷ್ ಎಂಬಾತ ನಾಪತ್ತೆಯಾಗಿರುವ ಬಗ್ಗೆ ಧನುಷ್ ಅವರ ತಂದೆ ಚೋಮ ನಾಯ್ಕ ಅವರು ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ನಿನ್ನೆ ರಾತ್ರಿ ಬಂಟ್ವಾಳ ತಾಲೂಕು ವಿಟ್ಲಪಡ್ನೂರು ಗ್ರಾಮದ ಶಾಂತಿಯಡ್ಕ ಎಂಬಲ್ಲಿರುವ ಮನೆಯಿಂದ ತನ್ನ ಮಾರುತಿ ಕಾರಿನಲ್ಲಿ ಕನ್ಯಾನದ ಧನು ಎಂಬವರು ವಿಟ್ಲ, ಕಡಂಬು ಕಡೆಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದು. ನಂತರ ಮೊಬೈಲ್ ಕೂಡಾ ಸ್ವಿಚ್ ಆಫ್ ಆಗಿರುತ್ತದೆ. ಈ ವರೆಗೆ ಮಗ ಮನೆಗೆ ಬಂದಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಮಗ ನಾಪತ್ತೆಯಾಗಿರುವ ಬಗ್ಗೆ ಸ್ನೇಹಿತರಲ್ಲಿ ವಿಚಾರಿಸಿದಾಗ ಯಾವುದೇ ಮಾಹಿತಿ ದೊರೆತಿಲ್ಲ, ಮಗನನ್ನು ಪತ್ತೆ ಮಾಡಿಕೊಡುವಂತೆ ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಕಾರು ಹೊಳೆಗೆ ಬಿದ್ದ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಂಡಿದ್ದು, ಕಾರು ದೊರೆತರೂ ಇಬ್ಬರು ಯುವಕರು ಮಾತ್ರ ಕಾರಿನಲ್ಲಿ ಪತ್ತೆಯಾಗಿರಲಿಲ್ಲ. ಇದೀಗ ನಾಪತ್ತೆಯಾಗಿರುವವರ ಪೈಕಿ ಓರ್ವ ಧನುಷ್ ನ ಪೋಷಕರು ದೂರು ನೀಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka