ನಾಪತ್ತೆಯಾಗಿದ್ದ ಬಸ್ ಮಾಲಕ ಶವವಾಗಿ ಪತ್ತೆ
ಶಿವಮೊಗ್ಗ: ಶನಿವಾರ ನಾಪತ್ತೆಯಾಗಿದ್ದ ಸಾಗರದ ಪ್ರಕಾಶ್ ಟ್ರಾವೆಲ್ಸ್ನ ಮಾಲೀಕ ಇಂದು ಶವವಾಗಿ ಪತ್ತೆಯಾಗಿದ್ದಾರೆ.
ಶನಿವಾರ ಹೊಸನಗರ ತಾಲೂಕಿನ ಪಟಗುಪ್ಪೆ ಸೇತುವೆ ಬಳಿ ಅವರ ಕಾರು ಹಾಗೂ ಮೊಬೈಲ್ ಪತ್ತೆಯಾಗಿತ್ತು. ಅನುಮಾನಗೊಂಡು ಪಟಗುಪ್ಪ ಸೇತುವೆ ಬಳಿ ಶೋಧ ಕಾರ್ಯ ನಡೆಸಲಾಗುತ್ತಿತ್ತು. ಆದರೆ ಇಂದು ಬೆಳಗ್ಗೆ ಪ್ರಕಾಶ್ ಟ್ರಾವೆಲ್ಸ್ ಮಾಲಕ ಪ್ರಕಾಶ್ ಅವರ ಶವ ದಡದ ಬಳಿ ಪತ್ತೆಯಾಗಿದೆ.
ಬಸ್ ಟ್ರಾವೆಲ್ಸ್ ನಡೆಸುತ್ತಿದ್ದ ಪ್ರಕಾಶ್ ಅವರು ಸಾಲದ ಬಾಧೆಗೆ ಸಿಲುಕಿದ್ದರು. ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡರಾ ಎಂಬ ಶಂಕೆ ವ್ಯಕ್ತಪಡಿಸಲಾಗಿದೆ.
ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳಿ ಜನರ ದಾರಿ ತಪ್ಪಿಸುವುದೇ ಬಿಜೆಪಿ ಸರ್ಕಾರದ ಸಾಧನೆ: ಈಶ್ವರ ಖಂಡ್ರೆ
ಒಡಿಶಾದಲ್ಲಿ ವಿಷಾಹಾರ ಸೇವಿಸಿದ್ದ ಕಾರ್ಕಳದ ಯುವಕ ಸಾವು
ರಾಜ್ಯ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ನಿಧನ