ನಾಪತ್ತೆಯಾಗಿದ್ದ ಪೌರ ಕಾರ್ಮಿಕನ ಮೃತದೇಹ ಪತ್ತೆ
ಬೆಳ್ತಂಗಡಿ: ನಾಪತ್ತೆಯಾಗಿದ್ದ ಪಟ್ಟಣ ಪಂಚಾಯತ್ ಪೌರ ಕಾರ್ಮಿಕನ ಮೃತದೇಹ ಬೆಳ್ತಂಗಡಿ ಸರ್ಕಾರಿ ಮೈದಾನದಲ್ಲಿ ಕೊಳೆತ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದೆ.
ಮೂಲತಃ ಮೈಸೂರು ಜಿಲ್ಲೆಯ ಕೆ.ಆರ್.ನಗರದ ನಿವಾಸಿಯಾಗಿರುವ 43 ವರ್ಷ ವಯಸ್ಸಿನ ಲಿಂಗ ಶೆಟ್ಟಿ ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ. ಇವರು ಬೆಳ್ತಂಗಡಿಯಲ್ಲಿ ವಾಸವಿದ್ದರು.
ವರದಿಯ ಪ್ರಕಾರ ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ಅವರು, ಈ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದರು. ಆ ಬಳಿಕ ಆಸ್ಪತ್ರೆಗೆ ದಾಖಲಾಗಿ ವಾಪಸ್ ಆಗಿದ್ದರು. ಇದಾದ ಬಳಿಕ ಮತ್ತೆ ನಾಪತ್ತೆಯಾಗಿದ್ದು, ಆ ಬಳಿಕ ಇದೀಗ ಅವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಇನ್ನೂ ಮೃತದೇಹ ಪತ್ತೆಯಾದ ಸ್ಥಳದಲ್ಲಿ ಮೃತರ ಬಟ್ಟೆ, ಹಣ, ಐಡಿ, ಚಪ್ಪಲಿ ಪತ್ತೆಯಾಗಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಯುಗಾದಿ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಎಲ್ಲೆಲ್ಲಿ ಎಷ್ಟು ಬೆಲೆ ಏರಿಕೆ?
ರಾತ್ರಿ 7ರ ನಂತರ ಕಲ್ಲಂಗಡಿ ಹಣ್ಣು ತಿನ್ನಬಾರದು; ಯಾಕೆ ಗೊತ್ತಾ?
ಎಪ್ರಿಲ್ ತಿಂಗಳು ‘ದಲಿತ ಇತಿಹಾಸ ತಿಂಗಳು’ ಎಂದು ಘೋಷಿಸಿದ ಕೆನಡಾದ ಬ್ರಿಟಿಷ್ ಕೊಲಂಬಿಯಾ ಸರ್ಕಾರ
ಹಿಜಾಬ್, ಹಲಾಲ್ ಬಗ್ಗೆ ಮಾತನಾಡಿದರೆ ಏನಾಗುತ್ತೋ ಅನ್ನೋದು ಬೇಡ: ಕಾಂಗ್ರೆಸ್ ನಾಯಕರಿಗೆ ಸಿದ್ದರಾಮಯ್ಯ ಹೇಳಿದ್ದೇನು?