ಸೆಪ್ಟೆಂಬರ್ 9ರಂದು ನಾರಾಯಣ ಗುರು ಜಯಂತಿ ಪ್ರಯುಕ್ತ ಗುರುಪೂಜೆ
ಬ್ರಹ್ಮ ಶ್ರೀ ನಾರಾಯಣ ಗುರುಗಳ 168 ಜಯಂತಿ ಪ್ರಯುಕ್ತ ಗುರುಪೂಜೆಯು ಸೆಪ್ಟೆಂಬರ್ 9 ರಂದು ಮಂಗಳೂರು ನಗರದ ಮಂಗಳಾದೇವಿ ಪ್ರಾಂಗಣ ದಲ್ಲಿ ನಡೆಸಲು ನಿರ್ಧರಿಸಿದ್ದೇವೆ ಎಂದು ಬಿಲ್ಲವ ಸಂಘ ಮಂಗಳೂರು ಇದರ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ತಿಳಿಸಿದರು.
ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮವು ಭಜನೆಯೊಂದಿಗೆ ಪ್ರಾರಂಭಗೊಂಡು, ಸಭಾ ಕಾರ್ಯಕ್ರಮ ಮತ್ತು ಮಹಾಪೂಜೆಯೊಂದಿಗೆ ಸಂಪನ್ನಗೊಳ್ಳಲಿದೆ ಎಂದು ತಿಳಿಸಿದರು.
ಬಿಲ್ಲವ ಸಂಘವು ಪ್ರಪ್ರಥಮ ಬಾರಿಗೆ ಪ್ರತಿಷ್ಠಿತ ಬಿಲ್ಲವ ಸಮಾಜದಲ್ಲಿ, ವಿವಿಧ ಕ್ಷೇತ್ರದಲ್ಲಿ ತನ್ನದೇ ಆದ ಸೇವೆ ಸಲ್ಲಿಸುತ್ತಿರುವ ಗಣ್ಯ ವ್ಯಕ್ತಿಗಳನ್ನು ಗುರುತಿಸಿ ನೀಡುವ ಸನ್ಮಾನದ ಪ್ರಶಸ್ತಿಯೇ ‘ಗುರು ಶ್ರೀ’ ಪ್ರಸಕ್ತ ಸಾಲಿನಲ್ಲಿ ಐದು ಕ್ಷೇತ್ರವನ್ನು ಆಯ್ಕೆ ಮಾಡಿದ್ದೇವೆ ಎಂದು ತಿಳಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka