ನಾರಾಯಣ ಗುರುಗಳ ವಿಚಾರ ಮುಂದಿಟ್ಟು ಕೇರಳದಿಂದ ಅನವಶ್ಯಕ ವಿವಾದ: ಸಚಿವ ಸುನಿಲ್ ಕುಮಾರ್
ಉಡುಪಿ: ಗಣರಾಜ್ಯೋತ್ಸವ ಪರೇಡ್‌ನಲ್ಲಿ ನಾರಾಯಣ ಗುರುಗಳ ಹೆಸರನ್ನು ಮುಂದಿಟ್ಟುಕೊಂಡು ಕೇರಳ ರಾಜ್ಯ ಅನವಶ್ಯಕ ವಿವಾದ ಸೃಷ್ಟಿಸುತ್ತಿರುವುದು ಸರಿಯಲ್ಲ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈವರೆಗೂ ನಡೆದುಕೊಂಡ ಬಂದ ಪದ್ಧತಿಯಂತೆ ಗಣರಾಜ್ಯೋತ್ಸವ ಪೆರೇಡ್ ಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸೇರಿ 36 ಕಡೆಗಳಿಂದ ಸ್ತಬ್ಧಚಿತ್ರಗಳನ್ನುಕಳುಹಿಸಲಾಗುತ್ತದೆ. ಆದರೆ, ಪರೇಡ್‌ಗೆ 12 ರಾಜ್ಯಗಳ ಸ್ತಬ್ಧ ಚಿತ್ರಗಳನ್ನು ಮಾತ್ರ ಪರಿಗಣಿಸಲಾಗುತ್ತದೆ. ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪರೇಡ್‌ನಲ್ಲಿ ಭಾಗವಹಿಸಲು ಅವಕಾಶ ಇರುವುದಿಲ್ಲ. 3 ವರ್ಷಕ್ಕೊಮ್ಮೆ ಪ್ರತಿ ರಾಜ್ಯಗಳಿಗೆ ಭಾಗವಹಿಸುವ ಅವಕಾಶವಿರುತ್ತದೆ.
ಅದರಂತೆ, 2018 ಮತ್ತು 2021ರಲ್ಲಿ ಕೇರಳ ರಾಜ್ಯ ಸ್ತಬ್ಧಚಿತ್ರಗಳೊಂದಿಗೆ ಗಣರಾಜ್ಯೋತ್ಸವದಲ್ಲಿ ಭಾಗವಹಿಸಿತ್ತು. ಪುನರಾವರ್ತಿತ ನಿಯಮದಂತೆ ಕಳೆದ ವರ್ಷ ಭಾಗವಹಿಸಿದ ರಾಜ್ಯಗಳನ್ನು ಬಿಟ್ಟು ಉಳಿದ 12 ರಾಜ್ಯಗಳಿಗೆ ಈ ವರ್ಷ ಪರೇಡ್‌ನಲ್ಲಿ ಭಾಗವಹಿಸುವ ಅವಕಾಶವಿರುತ್ತದೆ.
ನಿಯಮಾವಳಿಯಂತೆ 2021ರ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕೇರಳಕ್ಕೆ ಭಾಗವಹಿಸಲು ಅವಕಾಶ ಇಲ್ಲ. ಈ ನಿಯಮ ತಿಳಿದಿದ್ದರೂ ಕೇರಳ ನಾರಾಯಣ ಗುರುಗಳ ವಿಚಾರವನ್ನು ಮುಂದಿಟ್ಟುಕೊಂಡು ಅನವಶ್ಯಕ ವಿವಾದವನ್ನು ಹುಟ್ಟು ಹಾಕುತ್ತಿದೆ ಎಂದು ಸುನಿಲ್ ಕುಮಾರ್ ಟೀಕಿಸಿದ್ದಾರೆ.
ಕೇರಳವು ನಾರಾಯಣ ಗುರುಗಳ ವಿಚಾರವನ್ನು ಎಳೆದು ತಂದು ವಿವಾದ ಹುಟ್ಟು ಹಾಕುತ್ತಿರುವುದು ಶೋಭೆ ತರುವಂಥದ್ದಲ್ಲ. ಕಮ್ಯುನಿಸ್ಟರಿಂದ ನಾರಾಯಣ ಗುರುಗಳ ತತ್ವಾದರ್ಶವನ್ನು ಕಲಿಯಬೇಕಾಗಿಲ್ಲ. ನಾರಾಯಣ ಗುರುಗಳು ಎಲ್ಲರಿಗೂ ಪ್ರಾತಃ ಸ್ಮರಣೀಯರು ಹಾಗೂ ಪೂಜನೀಯರು ಎಂದು ಸುನಿಲ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಜೆಎನ್ ಯು ನ ಪಿಎಚ್ ಡಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ: ದೂರು ದಾಖಲು
ಕಾರಿನ ಟೈರ್ ಬ್ಲಾಸ್ಟ್: ಸ್ಥಳದಲ್ಲಿಯೇ ಇಬ್ಬರ ಸಾವು
ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಭೂಕಂಪನ: 26 ಮಂದಿ ಸಾವು
ಭಾರತದ ಈಶಾನ್ಯ ಭಾಗದಲ್ಲಿ ಕಂಪಿಸಿದ ಭೂಮಿ: ರಿಕ್ಟರ್ ಮಾಪಕದಲ್ಲಿ 4.9 ತೀವ್ರತೆ ದಾಖಲು