ನರ್ಮದಾ ನದಿಗೆ ಉರುಳಿದ ಬಸ್: 12 ಮಂದಿ ಸಾವು
18/07/2022
ಮಧ್ಯಪ್ರದೇಶ: ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ನರ್ಮದಾ ನದಿಗೆ ಮಹಾರಾಷ್ಟ್ರ ರಸ್ತೆ ಸಾರಿಗೆ ಬಸ್ ಬಿದ್ದು ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ.
ಧಾರ್ ಮತ್ತು ಖಾರ್ಗೋನ್ ಗಡಿಯ ಸಮೀಪದಲ್ಲಿರುವ ರಾಷ್ಟ್ರೀಯ ಹೆದ್ದಾರಿ , ಆಗ್ರಾ-ಮುಂಬೈ ರಸ್ತೆ ಸೇತುವೆಯಮೇಲೆ ಬರುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಸ್ಸಿನಲ್ಲಿದ್ದ 16ಕ್ಕೂ ಹೆಚ್ಚು ಪ್ರಯಾಣಿಕರನ್ನು ರಕ್ಷಿಸಲಾಗಿದೆ. ಆಸ್ಪತ್ರೆಗೆ ದಾಖಲಾದ ಹಲವರ ಪರಿಸ್ಥಿತಿ ಚಿಂತಾಜನಕವಾಗಿದೆ. ಮೃತ ಬಗ್ಗೆ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka