ಹಾಸ್ಯ ನಟ ರಾಜು ತಾಳಿಕೋಟೆ ಮೇಲೆಯೂ ಹಲ್ಲೆ: ಆಸ್ಪತ್ರೆಗೆ ದಾಖಲಾಗಿರುವ ನಟ - Mahanayaka
10:37 AM Wednesday 10 - September 2025

ಹಾಸ್ಯ ನಟ ರಾಜು ತಾಳಿಕೋಟೆ ಮೇಲೆಯೂ ಹಲ್ಲೆ: ಆಸ್ಪತ್ರೆಗೆ ದಾಖಲಾಗಿರುವ ನಟ

actor raju talikote
14/09/2021

ವಿಜಯಪುರ: ಖ್ಯಾತ ಹಾಸ್ಯನಟ ರಾಜು ತಾಳಿಕೋಟೆ ಅವರ ಅಕ್ಕನ ಮಗನ ಪತ್ನಿಗೆ ಥಳಿಸಿ ವಿಷ ಕುಡಿಸಲು ಯತ್ನಿಸಿದ್ದಾರೆ ಎಂದು ಒಂದೆಡೆ ದೂರು ದಾಖಲಾಗಿದ್ದರೆ, ಇತ್ತ ರಾಜು ತಾಳಿಕೋಟೆ ಅವರು ಕೂಡ ಆಸ್ಪತ್ರೆಗೆ ದಾಖಲಾಗಿದ್ದು, ತನ್ನ ಮೇಲೆ ಹಲ್ಲೆ ನಡೆದಿದೆ ಎಂದು ಅವರು ಕೂಡ ಆರೋಪಿಸಿದ್ದಾರೆ.


Provided by

ಮೇಲ್ನೋಟಕ್ಕೆ ಇದೊಂದು ಕೌಟುಂಬಿಕ ಕಲಹದಂತೆ ಕಂಡು ಬಂದಿದೆ. ಅಕ್ಕನ ಮಗ ಫಯಾಜ್ ಕರಜಗಿ ಮತ್ತು ಆತನ ಪತ್ನಿ ಸೇರಿ ಸಂಬಂಧಿಕರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಅವರಿಗೆ ರಾಜಕಾರಣಿಗಳ ಬೆಂಬಲವಿದ್ದು, ಪಿಸ್ತೂಲ್ ತೋರಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ರಾಜು ತಾಳಿ ಕೋಟೆ ಆರೋಪಿಸಿದ್ದಾರೆ.

ಒಂದು ವೇಳೆ ನನ್ನ ಜೀವಕ್ಕೆ ಏನಾದರೂ ತೊಂದರೆಯಾದರೆ, ಅದಕ್ಕೆ ಸನಾ ಸಂಬಂಧಿಕ ಎಸ್.ಕೆ.ಮೋದಿಯೇ ಕಾರಣ ಎಂದು ರಾಜು ತಾಳಿಕೋಟೆ ಹೇಳಿದ್ದಾರೆ.

ಸನಾ ತಾಯಿ ಫಾತಿಮಾ ಶಿರಹಟ್ಟಿ ಕೂಡ ರಾಜು ತಾಳಿಕೋಟೆ ಅವ್ರ ವಿರುದ್ಧ ವಿಜಯಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ರಾಜು ತಾಳಿಕೋಟೆ, ಪತ್ನಿ ಪ್ರೇಮಾ ತಾಳಿಕೋಟೆ, ಫಯಾಜ್ ಕರಜಗಿ, ಸನಾ ಭಾವ ಪಿಂಟು ಸೇರಿ ಆರು ಜನರ ವಿರುದ್ಧ ದೂರು ದಾಖಲಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು 8088059494 ನಂಬರ್ ನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಸೇರಿಸಿಕೊಳ್ಳಿ

ಇನ್ನಷ್ಟು ಸುದ್ದಿಗಳು…

RPI: ಡಾ.ಬಿ.ಆರ್.ಅಂಬೇಡ್ಕರ್ ಅವರ ರಾಜಕೀಯ ಚಿಂತನೆ ಮತ್ತು ಪರ್ಯಾಯ ರಾಜಕಾರಣ | ತುಮಕೂರು ಜಿಲ್ಲಾ ಮಟ್ಟದ ಕಾರ್ಯಕರ್ತರ ಕಾರ್ಯಾಗಾರ

ಆಸ್ತಿಗಾಗಿ ಸಹೋದರರ ಜಗಳ: ಕಟ್ಟಡದ ಮೇಲಿನಿಂದ ಓರ್ವ ಸಹೋದರನನ್ನು ಕೆಳಕ್ಕೆಸೆಯಲು ಯತ್ನ

ಬಟ್ಟೆ ಬದಲಿಸುತ್ತಿದ್ದ ವಿಡಿಯೋ ಮಾಡಿ, ಬೆದರಿಸಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ

ಎನ್ ಇಪಿ ವಿರೋಧಿಸಿ ವಿಧಾನ ಸೌಧಕ್ಕೆ ಮುತ್ತಿಗೆ ಹಾಕಲು ಕ್ಯಾಂಪಸ್ ಫ್ರಂಟ್ ಯತ್ನ | ಪೊಲೀಸರಿಂದ ಲಾಠಿ ಚಾರ್ಜ್

ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಗೆದ್ದರೂ, ವಿರೋಧ ಪಕ್ಷದಲ್ಲಿಯೇ ಕೂರಿಸುತ್ತೇನೆ | ಯಡಿಯೂರಪ್ಪ

ಅಜ್ಜಿಯ ಮನೆಗೆ ಬಂದ ಮಹಿಳೆ, ತನ್ನ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ!

ಶಾಕಿಂಗ್ ನ್ಯೂಸ್: ನಡೆದುಕೊಂಡು ಹೋಗುತ್ತಿದ್ದ ಯುವತಿಯ ಖಾಸಗಿ ಅಂಗ ಮುಟ್ಟಿ ಹಾಡಹಗಲೇ ಲೈಂಗಿಕ ಕಿರುಕುಳ!

ಹೈದರಾಬಾದ್: 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ | ಸಿಡಿದೆದ್ದ ಜನರು

 

ಇತ್ತೀಚಿನ ಸುದ್ದಿ