ನಟ ಸಂಚಾರಿ ವಿಜಯ್ ಗೆ ಅಪಘಾತ | ನಟನ ಆರೋಗ್ಯ ಸ್ಥಿತಿ ಗಂಭೀರ
13/06/2021
ಬೆಂಗಳೂರು: ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರಿಗೆ ಅಪಘಾತವಾಗಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ನಟ ವಿಜಯ್ ನಿನ್ನೆ ರಾತ್ರಿ ತನ್ನ ಸ್ನೇಹಿತನೊಂದಿಗೆ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿದೆ ಎಂದು ತಿಳಿದು ಬಂದಿದೆ.
ಸದ್ಯ ಸಂಚಾರಿ ವಿಜಯ್ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದ ಬಳಿಕ ಅವರನ್ನು ಆಸ್ಪತ್ರೆಗೆ ಕರೆತರಲಾಗಿದ್ದು, ಆಸ್ಪತ್ರೆಗೆ ಕರೆತರುವ ಸಂದರ್ಭದಲ್ಲಿಯೇ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು ಎಂದು ತಿಳಿದು ಬಂದಿದೆ.
ಮೆದುಳಿನ ಬಲಭಾಗದಲ್ಲಿ ಅವರಿಗೆ ರಕ್ತಸ್ರಾವವಾಗಿದ್ದು, ಹೀಗಾಗಿ ಮೆದುಳಿನ ಆಪರೇಶನ್ ನಡೆಸಲಾಗಿದೆ. ಇನ್ನೂ ತೊಡೆಯ ಮೂಳೆಯ ಶಸ್ತ್ರ ಚಿಕಿತ್ಸೆ ಕೂಡ ನಡೆಸಬೇಕಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ ಎಂದು ವರದಿಯಾಗಿದೆ.