ನಾಟಕ ಪ್ರದರ್ಶನದ ವೇಳೆಯೇ ಕಲಾವಿದ ಹೃದಯಾಘಾತದಿಂದ ಸಾವು
ಮಂಡ್ಯ: ನಾಟಕ ಪ್ರದರ್ಶನದ ವೇಳೆಯೇ ಕಲಾವಿದರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ನಡೆದಿದೆ.
ದುಗ್ಗನಹಳ್ಳಿ ಗ್ರಾಮದ ನಿವಾಸಿ ನಂಜಯ್ಯ(46) ಮೃತಪಟ್ಟ ಕಲಾವಿದರಾಗಿದ್ದು, ಕುರುಕ್ಷೇತ್ರದ ಕೃಷ್ಣ ಸಂಧಾನ ಅನ್ನೋ ನಾಟಕದಲ್ಲಿ ಸಾರ್ಥ್ಯಕಿ ಪಾತ್ರ ನಿರ್ವಹಿಸುತ್ತಿದ್ದ ಅವರು ಇದ್ದಕ್ಕಿದ್ದಂತೆಯೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಮಳವಳ್ಳಿ ತಾಲೂಕಿನ ಬಂಡೂರು ಗ್ರಾಮದ ಬಸವನಗುಡಿಯಲ್ಲಿ ನಾಟಕ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ. ಕಲಾವಿದನ ಸಾವಿನ ಹಿನ್ನೆಲೆಯಲ್ಲಿ ಗ್ರಾಮಸ್ಥರು ನಾಟಕವನ್ನು ಸ್ಥಗಿತಗೊಳಿಸಿದರು ಎನ್ನಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw