ನಟಿ ಪವಿತ್ರ ಲೋಕೇಶ್ 3ನೇ ಮದುವೆಯ ವದಂತಿ: ಕಾನೂನು ಸಮರಕ್ಕೆ ಮುಂದಾದ ನಟಿ - Mahanayaka
10:29 PM Wednesday 11 - December 2024

ನಟಿ ಪವಿತ್ರ ಲೋಕೇಶ್ 3ನೇ ಮದುವೆಯ ವದಂತಿ: ಕಾನೂನು ಸಮರಕ್ಕೆ ಮುಂದಾದ ನಟಿ

pavithra lokesh
29/06/2022

ಕಳೆದ ಒಂದು ವಾರದಿಂದ ಕನ್ನಡ ಖ್ಯಾತ ನಟಿ ಪವಿತ್ರ ಲೋಕೇಶ್ ಅವರ ವೈಯಕ್ತಿಕ ಜೀವನದ ಕುರಿತು ಹಲವು ವದಂತಿಗಳು ಹಬ್ಬಿದ್ದು, ತೆಲುಗಿನ ಖ್ಯಾತ ನಟ ನರೇಶ್ ಅವರೊಂದಿಗೆ ವಿವಾಹವಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಾಕಾರಿಯಾಗಿ ಬರೆಯಲಾಗುತ್ತಿದೆ ಎನ್ನಲಾಗಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ಮೈಸೂರಿನಲ್ಲಿ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಪವಿತ್ರ ಲೋಕೇಶ್ ಅವರ ಹೆಸರಿನಲ್ಲಿ ಕೆಲವರು ನಕಲಿ ಖಾತೆಗಳನ್ನು ತೆರೆದಿದ್ದಾರೆ ಎನ್ನಲಾಗಿದೆ. ಸುಚೇಂದ್ರ ಪ್ರಸಾದ್ ಜೊತೆಗೆ ಪವಿತ್ರ ಲೋಕೇಶ್ ಇಲ್ಲ, ನಟ ನರೇಶ್ ಜೊತೆಗೆ ಲಿವ್ ಇನ್ ಸಂಬಂಧ ಹೊಂದಿದ್ದಾರೆ ಎಂದು ಸುಳ್ಳು ಸುದ್ದಿಗಳನ್ನು ಹರಡಲಾಗುತ್ತಿದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಹಲವು ಭಾಷೆಗಳ ಚಿತ್ರಗಳಲ್ಲಿ ನಟಿಸಿರುವ ಪವಿತ್ರ ಲೋಕೇಶ್ ಅವರ ದಾಂಪತ್ಯ ಜೀವನದ ಬಗ್ಗೆ ಇಲ್ಲಸಲ್ಲದ ವಿಚಾರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಲಾಗುತ್ತಿದೆ ಎನ್ನಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ರಿಲಯನ್ಸ್ ಜಿಯೋ ಅಧ್ಯಕ್ಷ ಸ್ಥಾನಕ್ಕೆ ಮುಕೇಶ್ ಅಂಬಾನಿ ರಾಜೀನಾಮೆ

ಮನೆ ಮಾಲಿಕ ಸುಖ ನಿದ್ದೆಯಲ್ಲಿದ್ದ: ಹಸಿದು ಬಂದ ಆನೆ ಗೋಡೆಯನ್ನೇ ಒಡೆದು ಹಾಕಿತು!

ವಿದ್ಯಾರ್ಥಿನಿಯರ ತಾಯಂದಿರಿಗೆ ಅಶ್ಲೀಲ ಸಂದೇಶ ರವಾನಿಸಿದ ಶಿಕ್ಷಕ ಅಮಾನತು!

ಗೂಳಿ ಕಾಳಗದ ವೇಳೆ  ನಾಲ್ವರು ಸಾವು: ಕನಿಷ್ಠ 300 ಮಂದಿ ಗಾಯ

ಬ್ರಾಹ್ಮಣರ ಬಗ್ಗೆ ಹಗುರವಾಗಿ ಮಾತನಾಡಿದರೆ ಹುಷಾರ್… | ಬ್ರಾಹ್ಮಣ ಮುಖಂಡರಿಂದ ಎಚ್ಚರಿಕೆ

 

ಇತ್ತೀಚಿನ ಸುದ್ದಿ