ನಟಿಯರು ಡ್ರಗ್ಸ್ ಸೇವಿಸಿದ್ದು ದೃಡವಾಗಿದೆ, ಕೇಸ್ ಇನ್ನಷ್ಟು ಗಟ್ಟಿಯಾಗಿದೆ | ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದೇನು?
ಶಿವಮೊಗ್ಗ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಿಂದ ಸಂಗ್ರಹಿಸಿದ್ದ ಸ್ಯಾಂಪಲ್ ಪಾಸಿಟಿವ್ ಬಂದಿದ್ದು, ಈ ಎಫ್ ಎಸ್ ಎಲ್ ಲ್ಯಾಬ್ ವರದಿಯನ್ನು ವರದಿಯನ್ನು ಪೊಲೀಸರು ಕೋರ್ಟ್ ಗೆ ಹಾಜರು ಪಡಿಸಲಿದ್ದು, ಹೀಗಾಗಿ ಈ ಕೇಸ್ ಮತ್ತಷ್ಟು ಗಟ್ಟಿಯಾಗಲಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು.
ಈ ಸಂಬಂಧ ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಅಪರಾಧಿಗಳು ರಂಗೋಲಿ ಕೆಳಗೆ ನುಸುಳುವ ಕೆಲಸ ಮಾಡುತ್ತಿದ್ದಾರೆ. ಪೊಲೀಸ್ ಇಲಾಖೆ ನಿರಂತರವಾಗಿ ರೈಡ್ ಮಾಡುತ್ತಿದ್ದು, ಟನ್ ಗಟ್ಟಲೆ ಮಾದಕ ವಸ್ತು ವಶಪಡಿಸಿಕೊಂಡಿದೆ ಎಂದರು.
ರಾಜ್ಯದ ಎಫ್ ಎಸ್ ಎಲ್ ಪ್ರಯೋಗಾಲಯವನ್ನು ಮೇಲ್ದರ್ಜೇಗೇರಿಸುವ ಕೆಲಸ ನಡೆದಿದೆ. ಮಾದಕ ದ್ರವ್ಯ ಮಾರಾಟ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಪೊಲೀಸರೇ ಈ ವಿಷಯದಲ್ಲಿ ಶಾಮೀಲಾಗಿದ್ದರೆ, ಅವರ ವಿರುದ್ಧವೇ ಕ್ರಮ ಜರುಗಿಸಲಾಗುವುದು ಎಂದು ಅವರು ಹೇಳಿದರು.
ಇನ್ನಷ್ಟು ಸುದ್ದಿಗಳು…
“ನನ್ನನ್ನು ಮದುವೆಗೆ ಯಾಕೆ ಕರೆದಿಲ್ಲ” ಎಂದು ಪ್ರಶ್ನಿಸಿ ನವವಿವಾಹಿತನಿಗೆ ಹಿಗ್ಗಾಮುಗ್ಗಾ ಥಳಿಸಿದ ಸಂಬಂಧಿಕ!
ಮಹಿಳೆಯರು ಮನೆಯಲ್ಲಿಯೇ ಇರಿ, ಇಲ್ಲವಾದರೆ ಉಗ್ರರು ನಿಮ್ಮನ್ನು ದುರುಪಯೋಗಪಡಿಸಿಕೊಳ್ಳಬಹುದು | ತಾಲಿಬಾನ್ ನಾಯಕ
ತಮಿಳುನಾಡು ಬಿಜೆಪಿ ನಾಯಕನ ಅಶ್ಲೀಲ ವಿಡಿಯೋ ಯೂಟ್ಯೂಬ್ ನಲ್ಲಿ ವೈರಲ್
ಎನ್. ಮಹೇಶ್ ಹಿಂದೂ ಧರ್ಮಕ್ಕೆ ಬೈದು ಶಾಸಕರಾದವರು! | ಎನ್.ಮಹೇಶ್ ವಿರುದ್ಧ ಅಪಸ್ವರ ಎತ್ತಿದ ಬಿಜೆಪಿ ಶಾಸಕ
ತೆನೆ ಇಳಿಸಿ, ಕೈ ಹಿಡಿಯುತ್ತಾರಾ ಜಿ.ಟಿ.ದೇವೇಗೌಡ? | ಅವಮಾನಗಳಿಂದ ಬೇಸತ್ತು ಜೆಡಿಎಸ್ ಬಿಡಲು ತೀರ್ಮಾನ!
ರವಿಚಂದ್ರನ್ ಅವರ “ಯಮ್ಮೊ ಯಮ್ಮೋ ನೋಡ್ಬಾರ್ದನ್ನು ನಾ ನೋಡ್ಡೆ” ಅನ್ನೋ ಹಾಡು ಇಷ್ಟ ಎಂದ ನಟಿ ನವ್ಯಾ