ನವವಿವಾಹಿತೆ ಟೆಕ್ಕಿ ಅನುಮಾನಾಸ್ಪದ ಸಾವು: ವರದಕ್ಷಿಣೆ ಕಿರುಕುಳ ಆರೋಪ - Mahanayaka

ನವವಿವಾಹಿತೆ ಟೆಕ್ಕಿ ಅನುಮಾನಾಸ್ಪದ ಸಾವು: ವರದಕ್ಷಿಣೆ ಕಿರುಕುಳ ಆರೋಪ

navya
24/02/2022

ಚಿಕ್ಕಬಳ್ಳಾಪುರ: ನವವಿವಾಹಿತೆ ಟೆಕ್ಕಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಪ್ರಶಾಂತ ನಗರದಲ್ಲಿ ನಡೆದಿದೆ.

ನವ್ಯಾ ಎಸ್.ಆರ್. (23) ಮೃತ ನವವಿವಾಹಿತೆ ಟೆಕ್ಕಿ. ಈಕೆಯ ಮೃತದೇಹ ಪ್ರಶಾಂತ ನಗರದ ಮನೆಯ ಮೂರನೇ ಅಂತಸ್ತಿನ ಸ್ಟೋರ್ ರೂಂನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಪೊಲೀಸರು ಹಾಗೂ ತಾಲೂಕು ದಂಡಾಧಿಕಾರಿ ಗಣಪತಿ ಶಾಸ್ತ್ರೀ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.

ಇತ್ತ ಮೃತಳ ಸಂಬಂಧಿಕರು ಗಂಡ ಚೇತನ್ ಹಾಗೂ ಅತ್ತೆ ಮಾವನ ವಿರುದ್ಧ ವರದಕ್ಷಿಣೆ ಕಿರುಕುಳದ ಆರೋಪ ಹೊರಿಸಿದ್ದಾರೆ. ತಮ್ಮ ಮಗಳ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿ ನಂತರ ನೇಣು ಹಾಕಿದ್ದಾರೆ ಅಂತ ಆರೋಪಿಸಿದ್ದಾರೆ. ಮತ್ತೊಂದೆಡೆ ಮಗಳನ್ನು ಕಳೆದುಕೊಂಡ ದುಃಖದ ಮಡುವಿನಲ್ಲಿರುವ ಮೃತಳ ಸಂಬಂಧಿಕರು ಗಂಡ ಚೇತನ್ ಮೇಲೆ ಮುಗಿ ಬಿದ್ದು ಹಲ್ಲೆ ನಡೆಸಿದ್ದಾರೆ.ಘಟನೆ ಸಂಬಂಧ ಚಿಕ್ಕಬಳ್ಳಾಪುರ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ರಷ್ಯಾ ವಿರುದ್ಧ ಪ್ರತಿದಾಳಿ: ಐದು ವಿಮಾನ, ಒಂದು ಹೆಲಿಕಾಪ್ಟರ್ ಹೊಡೆದುರುಳಿಸಿದ ಉಕ್ರೇನ್’

ನಟ ಚೇತನ್ ಬಂಧನ ವಿಚಾರ: ಪೊಲೀಸರ ನಡೆ ಅನುಮಾನಾಸ್ಪದವಾಗಿದೆ; ಮಾಜಿ ಪೊಲೀಸ್ ಅಧಿಕಾರಿ ಅನುಪಮಾ ಶೆಣೈ

ಸಾಮೂಹಿಕ ಅತ್ಯಾಚಾರ: ಮನನೊಂದು ಯುವತಿ ಆತ್ಮಹತ್ಯೆ

ಆನೆಕಾಲು ರೋಗ ತಡೆ ಮಾತ್ರೆ ಸೇವನೆ: 19 ವಿದ್ಯಾರ್ಥಿಗಳು ಅಸ್ವಸ್ಥ

ಕಟ್ಟಿಗೆ ಸಂಗ್ರಹಿಸುತ್ತಿದ್ದ ಮಹಿಳೆಯ ಮಾನಭಂಗಕ್ಕೆ ಯತ್ನ

 

ಇತ್ತೀಚಿನ ಸುದ್ದಿ