ಆಸ್ಪತ್ರೆಯಲ್ಲಿ ನವಜಾತ ಶಿಶುಗಳ ಪಾದಗಳನ್ನು ಕಚ್ಚಿ ತಿಂದ ಇಲಿಗಳು - Mahanayaka
8:26 AM Thursday 12 - December 2024

ಆಸ್ಪತ್ರೆಯಲ್ಲಿ ನವಜಾತ ಶಿಶುಗಳ ಪಾದಗಳನ್ನು ಕಚ್ಚಿ ತಿಂದ ಇಲಿಗಳು

babies
18/05/2021

ಭೋಪಾಲ್: ಮಧ್ಯಪ್ರದೇಶದ ಇಂದೂರ್ ನ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಇಲಿಗಳು ನವಜಾತ ಶಿಶುಗಳ ಪಾದಗಳನ್ನು ಕಚ್ಚಿ ತಿಂದ ಆಘಾತಕಾರಿ ಘಟನೆಯೊಂದು ವರದಿಯಾಗಿದೆ.

ಆಸ್ಪತ್ರೆಯ ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು,  ಸರ್ಕಾರದ ಅದೀನದಲ್ಲಿರುವ ಮಹಾರಾಜ ಯಶವಂತರಾವ್ ಎಂಬ ಹೆಸರಿನ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.

ಇನ್ನೂ ಈ ಬಗ್ಗೆ ಮಾಹಿತಿ ನೀಡಿರುವ  ಆಸ್ಪತ್ರೆಯ ಅಧೀಕ್ಷಕ ಡಾ.ಪ್ರಮೇಂದ್ರ ಠಾಕೂರ್,  ಇಲಿಗಳು ನವಜಾತ ಶಿಶುಗಳ ಪಾದಗಳನ್ನು  ಕಚ್ಚಿ ತಿಂದಿವೆ ಎಂದು ಹೇಳಿದ್ದಾರೆ. ಹೆಚ್ಚಿನ ಮಾಹಿತಿಯನ್ನು ಅವರು ಬಿಟ್ಟುಕೊಟ್ಟಿಲ್ಲ. ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದಷ್ಟೇ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ