ನಾಯಿಯ ಮೇಲೆ ಲೈಂಗಿಕ ದೌರ್ಜನ್ಯ | ಯುವಕನ ಬಂಧನ
16/02/2021
ಮೈಸೂರು: ನಾಯಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಯುವಕನೋರ್ವನ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದು, ಪೀಪಲ್ ಫಾರ್ ಅನಿಮಲ್ ಸಂಸ್ಥೆ ಮೈಸೂರಿನ ವಿವಿ ಪುರಂ ಪೊಲೀಸ್ ಠಾಣೆಗೆ ನೀಡಿದ ದೂರಿನನ್ವಯ ಆರೋಪಿಯನ್ನು ಬಂಧಿಸಲಾಗಿದೆ.
ಸೋಮಶೇಖರ್ ಎಂಬ ಯುವಕ ಇಲ್ಲಿನ ಗೋಕುಲಂ 3ನೇ ಹಂತದ ಗಣಪತಿ ದೇವಸ್ಥಾನದ ರಸ್ತೆಯ ಬಳಿಯಲ್ಲಿ ಹೆಣ್ಣು ನಾಯಿಯ ಮೇಲೆ ದೌರ್ಜನ್ಯ ನಡೆಸಿದ್ದು, ಇದನ್ನು ಸ್ಥಳೀಯ ಯುವಕರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ಬಳಿಕ ಈ ದೃಶ್ಯಗಳನ್ನು ಆಧಾರಿಸಿ ಪಿಎಫ್ ಎ ಅಧಿಕಾರಿ ಕೆ.ಬಿ.ಹರೀಶ್ ಪೊಲೀಸರಿಗೆ ದೂರು ನೀಡಿದ್ದಾರೆ.
ದೂರಿನನ್ವಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ಪ್ರಾಣಿಗಳ ಜೊತೆ ಲೈಂಗಿಕ ಕ್ರಿಯೆ, ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಮೊದಲಾದ ಕಾಯ್ದೆಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.