ನಾಯಿಯ ಪ್ರಾಣ ಉಳಿಸಲು ಹೋಗಿ ತನ್ನ ಪ್ರಾಣ ಕಳೆದುಕೊಂಡ ಆಟೋ ಚಾಲಕ!
ರಸ್ತೆಗೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿದ ಆಟೋ ರಿಕ್ಷಾವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಮೃತಪಟ್ಟ ಘಟನೆ ಉಪ್ಪೂರು ಗ್ರಾಮದ ಅಮ್ಮುಜೆ ರೈಲ್ವೆ ಒವರ್ ಬ್ರಿಡ್ಜ್ ಬಳಿ ಆ.23ರಂದು ನಡೆದಿದೆ.
ಮೃತನನ್ನು ಆಟೋ ಚಾಲಕ 53 ವರ್ಷದ ಗಣೇಶ್ ಪೂಜಾರಿ ಮೃತ ದುರ್ದೈವಿ. ಇವರು ತನ್ನ ಆಪೇ ಆಟೋ ರಿಕ್ಷಾವನ್ನು ಹಾವಂಜೆ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದು, ಅಮ್ಮುಜೆ ರೈಲ್ವೆ ಒವರ್ ಬ್ರಿಡ್ಜ್ ನ ಸ್ವಲ್ಪ ಮುಂದೆ ನಾಯಿಯೊಂದು ರಸ್ತೆಗೆ ಅಡ್ಡ ಬಂದಿದೆ. ಇದನ್ನು ತಪ್ಪಿಸಲು ಹೋದಂತ ವೇಳೆ ನಿಯಂತ್ರಣ ತಪ್ಪಿದ ರಿಕ್ಷಾ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ.
ಇದರಿಂದ ಗಂಭೀರವಾಗಿ ಗಾಯಗೊಂಡ ಗಣೇಶ್ ಅವರನ್ನು ಉಡುಪಿಯ ಹೈಟೆಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆ ಕರೆದುಕೊಂಡು ಹೋಗಲಾಗಿತ್ತು. ಆದರೆ, ಅಲ್ಲಿ ಪರೀಕ್ಷಿಸಿದ ವೈದ್ಯರು ಗಣೇಶ್ ಅವರು ಅದಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka