ಲೋಕಸಭಾ ಚುನಾವಣೆ: ಬಿಹಾರದಲ್ಲಿ ಎನ್ ಡಿಎ ಸೀಟು ಹಂಚಿಕೆ ಒಪ್ಪಂದ ಅಂತಿಮ; ಬಿಜೆಪಿ 17, ಜೆಡಿಯು 16 ಸ್ಥಾನಗಳಲ್ಲಿ ಸ್ಪರ್ಧೆ
ಬಿಹಾರದಲ್ಲಿ ಬಿಜೆಪಿ 17, ಜೆಡಿಯು 16, ಲೋಕ ಜನಶಕ್ತಿ ಪಕ್ಷ (ಎಲ್‌ಜೆಪಿ) 5, ಹಿಂದೂಸ್ತಾನಿ ಅವಾಮ್ ಮೋರ್ಚಾ ಮತ್ತು ರಾಷ್ಟ್ರೀಯ ಲೋಕ ಮೋರ್ಚಾ ತಲಾ 1 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ.
ಬಿಹಾರ ಸೀಟು ಹಂಚಿಕೆ ಘೋಷಣೆಯ ನಂತರ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರು ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) ವೈಶಾಲಿ, ಹಾಜಿಪುರ, ಸಮಸ್ತಿಪುರ, ಖಗರಿಯಾ ಮತ್ತು ಜಮುಯಿಯಿಂದ 5 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಮಾಹಿತಿ ನೀಡಿದರು. ಹಿಂದೂಸ್ತಾನಿ ಅವಾಮ್ ಮೋರ್ಚಾ ಮತ್ತು ರಾಷ್ಟ್ರೀಯ ಲೋಕ ಮೋರ್ಚಾ ಕ್ರಮವಾಗಿ ಗಯಾ ಮತ್ತು ಕರಕಾಟ್ ಸ್ಥಾನಗಳಿಂದ ಸ್ಪರ್ಧಿಸುತ್ತವೆ.
ಎಲ್ಲರೂ ಒಗ್ಗಟ್ಟಿನಿಂದ ಚುನಾವಣೆಯಲ್ಲಿ ಸ್ಪರ್ಧಿಸುತ್ತೇವೆ ಎಂದು ರಾಜ್ಯ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಹೇಳಿದ್ದಾರೆ. ಈಗ ಸೀಟುಗಳನ್ನು ಅಂತಿಮಗೊಳಿಸಲಾಗಿದ್ದು, ಶೀಘ್ರದಲ್ಲೇ ಅಭ್ಯರ್ಥಿಗಳ ಪಟ್ಟಿಯನ್ನು ಸಹ ಘೋಷಿಸಲಾಗುವುದು ಎಂದು ಅವರು ಹೇಳಿದರು.
ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು ಡಾ.ಸುಖ್ ಬೀರ್ ಸಿಂಗ್ ಸಂಧು ಅವರು ಏಪ್ರಿಲ್ 19 ರಿಂದ ಏಳು ಹಂತಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ ಎಂದು ಶನಿವಾರ ಘೋಷಿಸಿದ್ದರು. ಸಿಇಸಿ ಪ್ರಕಾರ, ಉತ್ತರ ಪ್ರದೇಶ, ಬಿಹಾರ ಮತ್ತು ಪಶ್ಚಿಮ ಬಂಗಾಳ ಮೂರು ರಾಜ್ಯಗಳಲ್ಲಿ ಎಲ್ಲಾ ಏಳು ಹಂತಗಳಲ್ಲಿ ಮತದಾನ ನಡೆಯಲಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth