ಫಾಲ್ಸ್ ನಲ್ಲಿ ಮುಳುಗಿ ಆರೆಸ್ಸೆಸ್ ಕಾರ್ಯಕರ್ತ ಸಾವು - Mahanayaka

ಫಾಲ್ಸ್ ನಲ್ಲಿ ಮುಳುಗಿ ಆರೆಸ್ಸೆಸ್ ಕಾರ್ಯಕರ್ತ ಸಾವು

naveen kumar
16/03/2022

ಕಾರವಾರ: ಆರೆಸ್ಸೆಸ್ ಕಾರ್ಯಕರ್ತರೊಬ್ಬರು ಫಾಲ್ಸ್ ನಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮುರೇಗಾರ ಫಾಲ್ಸ್ ನಲ್ಲಿ ನಡೆದಿದೆ.

ತುಮಕೂರು ಮೂಲದ 35 ವರ್ಷ ವಯಸ್ಸಿನ ನವೀನ್ ಕುಮಾರ್ ಮೃತಪಟ್ಟವರು ಎಂದು ಗುರುತಿಸಲಾಗಿದ್ದು,  ಪ್ರವಾಸಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು  ಹೇಳಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮುರೇಗಾರ ಫಾಲ್ಸ್  ಗೆ ಸುಮಾರು 50 ಜನರೊಂದಿಗೆ ನವೀನ್ ಬಂದಿದ್ದರು ಎನ್ನಲಾಗಿದೆ. ಈಜಲು ತೆರಳಿದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆ ಸಂಬಂಧ ಶಿರಸಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನೆ ಸಂಬಂಧ ತನಿಖೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಹೋಳಿ ಹಬ್ಬದ ನಂತರ ಹಿಜಾಬ್ ಭವಿಷ್ಯ: ಸುಪ್ರೀಂ ಕೋರ್ಟ್

ಬೇಸಿಗೆಯಲ್ಲಿ ಕಬ್ಬಿನ ಹಾಲು ಸೇವಿಸಿ, ಈ ಎಲ್ಲ ಆರೋಗ್ಯ ಪ್ರಯೋಜನ ಪಡೆಯಿರಿ

ಫೇಸ್ ಬುಕ್, ಟ್ವಿಟ್ಟರ್ ಸಾಮಾಜಿಕ ಜಾಲತಾಣಗಳ ಬಗ್ಗೆ ಸೋನಿಯಾ ಗಾಂಧಿ ಗಂಭೀರ ಆರೋಪ

ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರಿಗೆ ಕಾಲೇಜು ಪ್ರವೇಶ ನಿರಾಕರಣೆ

ಮುಧೋಳ ಫೈಲ್ಸ್ !: ಜೋಡಿ ಕೊಲೆ ಪ್ರಕರಣ ಮಾಸುವ ಮೊದಲೇ ದಲಿತ ಯುವಕನ ಮೇಲೆ ಮಾರಣಾಂತಿ ಹಲ್ಲೆ!

ಇತ್ತೀಚಿನ ಸುದ್ದಿ