ನೀರಿಗೆ ಬಿದ್ದು ಇಬ್ಬರು ಯುವಕರ ದಾರುಣ ಸಾವು

ನೀರಿಗೆ ಬಿದ್ದು ಇಬ್ಬರು ಮೃತಪಟ್ಟಿರುವ ಪ್ರತ್ಯೇಕ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಕೊಳ್ಳೇಗಾಲ ತಾಲೂಕಿನ ಶಿವನಸಮುದ್ರದ ಕಾವೇರಿ ನದಿಗೆ ಇಳಿದಿದ್ದ ಪ್ರವಾಸಿಗನೋರ್ವ ಮೃತಪಟ್ಟಿದ್ದು ಬೆಂಗಳೂರು ಮೂಲದ ರೆಹಾನ್ ಅಹಮ್ಮದ್(18) ಮೃತನನ್ನು ಗುರುತಿಸಲಾಗಿದೆ.
ಸದ್ಯ, ಶವವನ್ನು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದ್ದು ಕೊಳ್ಳೇಗಾಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇನ್ನು, ಚಾಮರಾಜನಗರ ತಾಲೂಕಿನ ಉತ್ತುವಳ್ಳಿ ಗ್ರಾಮದ ಚೆಕ್ ಡ್ಯಾಂನಲ್ಲಿ ಯುವಕನೋರ್ವ ಬಿದ್ದು ಮೃತಯ ಘಟನೆ ಇಂದು ನಡೆದಿದೆ. ಉತ್ತುವಳ್ಳಿ ಗ್ರಾಮದ ಮಹದೇವಪ್ರಸಾದ್(26) ಮೃತ ಯುವಕನಾಗಿದ್ದು ಸಾವಿಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ. ಚಾಮರಾಜನಗರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw