ಕಾಲುಸಂಕದಿಂದ ಬಿದ್ದು ನೀರು ಪಾಲಾಗಿದ್ದ ಬಾಲಕಿಯ ಮೃತದೇಹ ಪತ್ತೆ
ಬೈಂದೂರು: ಶಾಲೆಯಿಂದ ಮನೆಗೆ ಬರುತ್ತಿದ್ದಾಗ ಕಾಲ್ತೋಡು ಗ್ರಾಮದ ಬೀಜಮಕ್ಕಿ ಎಂಬಲ್ಲಿ ಕಾಲುಸಂಕದಿಂದ ಬಿದ್ದು ನೀರು ಪಾಲಾಗಿದ್ದ ಕಾಲ್ತೋಡು ಗ್ರಾಮದ ಮಕ್ಕಿಮನೆಯ 2ನೇ ತರಗತಿ ವಿದ್ಯಾರ್ಥಿನಿ ಸನ್ನಿಧಿ(7) ಮೃತದೇಹ 48 ಗಂಟೆಗಳ ಬಳಿಕ ಇಂದು ಸಂಜೆ ಪತ್ತೆಯಾಗಿದೆ.
ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದ ಬಾಲಕಿಗಾಗಿ ನಿರಂತರವಾಗಿ ಶೋಧ ಕಾರ್ಯ ನಡೆಸಿದರೂ ಬುಧವಾರ ಸಂಜೆವರೆಗೂ ಸುಳಿವು ಇರಲಿಲ್ಲ. ಅಗ್ನಿ ಶಾಮಕ ದಳ ಸಿಬ್ಬಂದಿ, ಈಜುಪಟುಗಳಾದ ಮೀನುಗಾರ ನರೇಶ್ ಕೊಡೇರಿ ನೇತೃತ್ವದ 22 ಜನರ ತಂಡ, ಸಾರ್ವಜನಿಕರೂ ಸೇರಿ ನೂರಕ್ಕೂ ಅಧಿಕ ಮಂದಿ ಶೋಧ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.
ಸುಮಾರು 48 ಗಂಟೆಗಳ ಬಳಿಕ ಬಾಲಕಿ ಬಿದ್ದ ಕಾಲು ಸಂಕದಿಂದ ಸುಮಾರು 400 ಮೀಟರ್ ದೂರದ ನೀರಿನಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka