ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಮಾಸ್ಟರ್ ಮೈಂಡ್ ರಾಕೇಶ್ ರಂಜನ್ ಬಂಧನ
ನೀಟ್-ಯುಜಿ ಪ್ರಶ್ನೆ ಪತ್ರಿಕೆ ವಿವಾದ ಸುಪ್ರೀಂಕೋರ್ಟ್ ನಲ್ಲಿ ನಡೆಯುತ್ತಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯ ಹಿಂದಿನ ಮಾಸ್ಟರ್ ಮೈಂಡ್ ಅನ್ನು ಬಂಧಿಸಿದ ನಂತರ ಸಿಬಿಐ ಇಂದು ದೊಡ್ಡ ಯಶಸ್ಸನ್ನು ಗಳಿಸಿದೆ. ಸಿಬಿಐ ಇಂದು ಮಧ್ಯಾಹ್ನ ರಾಕೇಶ್ ರಂಜನ್ ಅಲಿಯಾಸ್ ರಾಕಿಯನ್ನು ಬಂಧಿಸಿದ್ದು, ನ್ಯಾಯಾಲಯದಿಂದ 10 ದಿನಗಳ ಕಸ್ಟಡಿಗೆ ಪಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನಾಲ್ಕು ಸ್ಥಳಗಳಲ್ಲಿ ದಾಳಿ ನಡೆಸಿದೆ. ಬಿಹಾರದ ಪಾಟ್ನಾ ಬಳಿ ಎರಡು ಮತ್ತು ಪಶ್ಚಿಮ ಬಂಗಾಳದ ಕೋಲ್ಕತಾ ಬಳಿ ಎರಡು ಕಡೆ ದಾಳಿ ನಡೆಸಲಾಗಿದೆ.
ಇಲ್ಲಿಯವರೆಗೆ ಜಾರ್ಖಂಡ್ ನ ಹಜಾರಿಬಾಗ್ ನ ಶಾಲೆಯ ಪ್ರಾಂಶುಪಾಲರು ಮತ್ತು ಉಪ ಪ್ರಾಂಶುಪಾಲರು ಸೇರಿದಂತೆ ಒಂದು ಡಜನ್‌ಗೂ ಹೆಚ್ಚು ವ್ಯಕ್ತಿಗಳನ್ನು ಬಂಧಿಸಲಾಗಿದೆ. ನೀಟ್ ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳನ್ನು ಸೋರಿಕೆ ಮಾಡುವ ರಾಷ್ಟ್ರೀಯ ಜಾಲದ ಬಗ್ಗೆ ರಾಜ್ಯ ಪೊಲೀಸ್ ಪಡೆಗಳು ಮತ್ತು ಸಿಬಿಐ ಎರಡೂ ತನಿಖೆ ನಡೆಸುತ್ತಿವೆ.
ಕಳೆದ ವಾರ ಪಾಟ್ನಾದಲ್ಲಿ ವಿದ್ಯಾರ್ಥಿಯೊಬ್ಬನನ್ನು ಬಂಧಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಕಿಯನ್ನು ಹೊರತುಪಡಿಸಿ ಸಿಬಿಐ ಎಂಟು ಜನರನ್ನು ಬಂಧಿಸಿದೆ. ಬಿಹಾರದಲ್ಲಿ ಮೂರು ಪ್ರತ್ಯೇಕ ಪ್ರಕರಣಗಳಿಗೆ ಐದು ಸೇರಿದಂತೆ ಸಿಬಿಐ ಈವರೆಗೆ ಆರು ಎಫ್ಐಆರ್ ಗಳನ್ನು ದಾಖಲಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth