ಅಧಿಕಾರಿಗಳ ನಿರ್ಲಕ್ಷ್ಯ: ಕೆಆರ್ ಎಸ್ ಡ್ಯಾಂ ಒಳಹರಿವಿನ ಸ್ಥಳದಲ್ಲಿ ತಡೆಗೋಡೆ ಕುಸಿತ
ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ನ ಕಾವೇರಿ ಕೆಆರ್‌ಎಸ್ ಡ್ಯಾಂ ಭರ್ತಿಯಾಗುವ ಹಂತಕ್ಕೆ ತಲುಪಿದೆ. ಇದೇ ವೇಳೆ ಡ್ಯಾಂನಿಂದ ಹೆಚ್ಚಿನ ಪ್ರಮಾಣದಲ್ಲಿ ಹೊರಹರಿವು ಬಿಡಲಾಗುತ್ತಿದೆ. ಈ ನಡುವೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಹೊರಹರಿವು ಜಾಗದಲ್ಲಿ ತಡೆಗೋಡೆ ಕುಸಿದಿರುವ ಘಟನೆ ನಡೆದಿದೆ.
ಕೆಆರ್ ಎಸ್ ಡ್ಯಾಂನ ನಗುವನ ತೋಟದ ಮುಂದೆ ಇರುವ ಗೇಟ್ ಬಳಿಯ ತೋಟಕ್ಕೆ ತೊಂದರೆಯಾಗದಿರಲಿ ಎಂದು ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ತಡೆಗೋಡೆಯನ್ನು ನಿರ್ಮಿಸಲಾಗಿತ್ತು.
ಇದೀಗ ಡ್ಯಾಂನಲ್ಲಿ ನೀರು ಭರ್ತಿಯಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ಸ್ವಲ್ಪವೂ ಮುನ್ನೆಚ್ಚರಿಕೆ ವಹಿಸದೇ ಆ ಗೇಟ್ ಗಳಿಂದ ಅಧಿಕ ಪ್ರಮಾಣದಲ್ಲಿ ನೀರು ಬಿಟ್ಟಿದ್ದು, ಇದರ ಪರಿಣಾಮ ತಡೆಗೋಡೆ ಕುಸಿದಿದೆ.
ಬೇರೆ ಬೇರೆ ಗೇಟ್ ಗಳಲ್ಲಿ ಅಧಿಕಾರಿಗಳು ನೀರು ಬಿಟ್ಟಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ. ಅಧಿಕಾರಿಗಳು ಹಿಂದೆ ನೋಡದೇ ನೀರು ಬಿಟ್ಟ ಪರಿಣಾಮ ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ದ ಕಾಮಗಾರಿ ನೀರು ಪಾಲಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: