ನಾನಾಗಲಿ, ಯತೀಂದ್ರನಾಗಲಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ - Mahanayaka
6:31 AM Wednesday 5 - February 2025

ನಾನಾಗಲಿ, ಯತೀಂದ್ರನಾಗಲಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ

siddaramaiah
15/01/2024

ಬೆಂಗಳೂರು: ನಾನಾಗಲಿ, ನನ್ನ ಮಗ ಯತೀಂದ್ರನಾಗಲಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಮೈಸೂರು-ಕೊಡಗು ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಸಿಎಂ ಪುತ್ರ ಯತೀಂದ್ರ ಸ್ಪರ್ಧಿಸಲಿದ್ದಾರೆ ಎನ್ನುವ ಚರ್ಚೆಯ ನಡುವೆ ಸಿಎಂ ಸಿದ್ದರಾಮಯ್ಯ ಈ ಸ್ಪಷ್ಟನೆ ನೀಡಿದ್ದಾರೆ.

ರಾಯಚೂರಿನಲ್ಲಿ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಮೈಸೂರು–ಕೊಡಗು ಕ್ಷೇತ್ರದಿಂದ ಯತೀಂದ್ರ ಸಿದ್ದರಾಮಯ್ಯ  ತಮ್ಮ ವಿರುದ್ಧ ಸ್ಪರ್ಧಿಸುತ್ತಾರೆ ಅಂತ ಸಂಸದ ಪ್ರತಾಪ್​ ಸಿಂಹ ಅವರಿಗೆ ಭಯ ಶುರುವಾಗಿದೆ. ಹೀಗಾಗಿ ಅವರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

ಆ ಕ್ಷೇತ್ರಗಳ ಶಾಸಕರು, ಸ್ಥಳೀಯ ಮುಖಂಡರು ಮತ್ತು ಪಕ್ಷದ ಪದಾಧಿಕಾರಿಗಳ ಶಿಫಾರಸುಗಳನ್ನು ಆಧರಿಸಿ ಟಿಕೆಟ್ ನೀಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು. ಯಾವುದೇ ವೈಯಕ್ತಿಕ ಆಯ್ಕೆಯನ್ನು ಆಧರಿಸಿ ಅಲ್ಲ. ಪ್ರತಾಪ್ ಸಿಂಹ ಭಯಗೊಂಡಿದ್ದಾರೆ, ಅದಕ್ಕಾಗಿಯೇ ಅವರು ಯತೀಂದ್ರ ಸ್ಪರ್ಧಿಸುತ್ತಾರೆ ಎಂದು ಹೇಳುತ್ತಿದ್ದಾರೆ. ನಾನು ಅಥವಾ ಯತೀಂದ್ರ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೇವೆ ಎಂದೂ ಹೇಳಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.

ಇತ್ತೀಚಿನ ಸುದ್ದಿ