ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಉಳ್ಳಾಲ: ಖಾಸಗಿ ಬಸ್‌ನಲ್ಲಿ ಚೆಕ್ಕರ್ ಆಗಿ ಕತೃವ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಕೊಲ್ಯ ಕಣೀರು ತೋಟದ ಕಣೀರುಬೀಡುವಿನ ಪ್ರವೀಣ್ ಪೂಜಾರಿ (34) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮೃತ ಪ್ರವೀಣ್ ಖಾಸಗಿ ಬಸ್‌ನಲ್ಲಿ ಚೆಕ್ಕರ್ ಆಗಿ ಕತೃವ್ಯ ನಿರ್ವಹಿಸುತ್ತಿದ್ದರು. ಸೋಮವಾರ ಸಂಜೆ ಮನೆಗೆ ಬಂದವರು ಕೋಣೆಯೊಳಗೆ ತೆರಳಿದ್ದರು.
ಈ ವೇಳೆ ಅವರ ತಾಯಿ ಮನೆ ಹೊಗಡೆ ಬೀಡಿ ಕಟ್ಟುವ ಕೆಲಸದಲ್ಲಿ ತೊಡಗಿದ್ದರು. ಸಂಜೆ 7.30ಕ್ಕೆ ಪತ್ನಿ ಕೆಲಸದಿಂದ ಮರಳಿದಾಗ ಪಕ್ಕಾಸಿಗೆ ಶಾಲಿನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ, ಅದಾಗಲೇ ಅವರು ಮೃತಪಟ್ಟಿದ್ದರು ಎನ್ನಲಾಗಿದೆ.
ಮುಂದಿನ ವಾರ ಮಗಳ ಐದನೇ ವರ್ಷದ ಹುಟ್ಟುಹಬ್ಬವಿದ್ದು, ಈ ಬಾರಿ ಅದ್ದೂರಿಯಾಗಿ ಆಚರಣೆ ಮಾಡಬೇಕೆಂದು ಮನೆಯಲ್ಲಿ ಹೇಳುತ್ತಿದ್ದರು. ಆದರೆ ಹುಟ್ಟುಹಬ್ಬಕ್ಕೆ ವಾರವಿರುವಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಈ ಘಟನೆ ಸಂಬಂಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ
ಸೇನೆಗೆ ಸೇರುವ ಹಂಬಲ: ಉಕ್ರೇನ್ ಪಡೆಗೆ ಸೇರಿದ ತಮಿಳುನಾಡಿನ ಯುವಕ
ರಷ್ಯಾ-ಉಕ್ರೇನ್ ಯುದ್ಧದ ನಡುವೆಯೇ ಗಗನಕ್ಕೇರಿದ ಅಡುಗೆ ಎಣ್ಣೆ ಬೆಲೆ
ಮನೆಗೆ ಬೆಂಕಿ ಬಿದ್ದು ಒಂದೇ ಕುಟುಂಬದ ಐವರು ಸಜೀವ ದಹನ
ಈರುಳ್ಳಿ ಸೇವನೆಯಿಂದಾಗುವ ಪ್ರಯೋಜನಗಳೇನು?