ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಎಸೆಸೆಲ್ಸಿ ವಿದ್ಯಾರ್ಥಿನಿ!
ವಿಟ್ಲ: 10ನೇ ತರಗತಿ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ನಡೆದಿದೆ.
ಮೂಲತಃ ಸುಳ್ಯ ತಾಲೂಕಿನ ಪಂಜ ನಿವಾಸಿ 14 ವರ್ಷ ವಯಸ್ಸಿನ ಆತ್ಮಿಕಾ ಆತ್ಮಹತ್ಯೆಗೆ ಶರಣಾದ ಬಾಲಕಿ ಎಂದು ಗುರುತಿಸಲಾಗಿದೆ. ಬಾಲಕಿಯ ಕುಟುಂಬ ಕನ್ಯಾನ ಗ್ರಾಮದ ಕಣಿಯೂರಿನ ದಿ.ಸುಲೈಮಾನ್ ಹಾಜಿ ಅವರ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ.
ಇಂದು ಮನೆ ಮಂದಿ ಕೆಲಸಕ್ಕೆ ಹೋದ ವೇಳೆಯಲ್ಲಿ ಬಾಲಕಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಕಾರಣಗಳೇನು ಎನ್ನುವುದು ತಿಳಿದು ಬಂದಿಲ್ಲ.
ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಾಹಿತಿ ಸಂಗ್ರಹಿಸಿ ತನಿಖೆ ನಡೆಸುತ್ತಿದ್ದಾರೆ.
ಇಂದು ಸಮಸ್ಯೆ ಎಂದು ಕಾಣಿಸುವ ಯಾವುದೇ ಸಮಸ್ಯೆಗಳು ನಾಳೆಯ ದಿನ ಒಂದು ಸಮಸ್ಯೆ ಎಂದೇ ನಮಗೆ ಅನ್ನಿಸುವುದಿಲ್ಲ. ಹಾಗಾಗಿ ಆತ್ಮಹತ್ಯೆ ಎನ್ನುವುದು ಯಾವುದೇ ಸಮಸ್ಯೆಗಳಿಗೆ ಪರಿಹಾರವಲ್ಲ. ಮನಸ್ಸಿಗೆ ನೋವು ತರುವ ಯಾವುದೇ ಸಮಸ್ಯೆಗಳಿಗೆ ಮಾನಸಿಕ ತಜ್ಞರಿಂದ ಸೂಕ್ತ ಸಲಹೆಗಳನ್ನು ಪಡೆದುಕೊಳ್ಳಿ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಟಿಪ್ಪರ್ ಲಾರಿ, ಬೈಕ್ ನಡುವೆ ಅಪಘಾತ: ಓರ್ವ ಯುವಕ ಸಾವು, ಮತ್ತೋರ್ವ ಗಂಭೀರ
ಭೀಕರ ಅಪಘಾತಕ್ಕೆ ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಬಲಿ
ಯುವತಿಯ ಮೇಲೆ ಅತ್ಯಾಚಾರ: ಬಾಡಿ ಬಿಲ್ಡರ್ ನ ಬಂಧನ
ಡ್ರೋಣ್ ಮೂಲಕ ಆಹಾರ ವಿತರಿಸಲು ಮುಂದಾದ ಸ್ವಿಗ್ಗಿ!
ರೈಲು ನಿಲ್ಲಿಸಿ ಎಣ್ಣೆ ಹೊಡೆಯಲು ಹೋದ ಲೋಕೋ ಪೈಲೆಟ್