ಅಪಾರ್ಟ್ ಮೆಂಟ್’ನಲ್ಲಿ ನೇಣು‌ಬಿಗಿದ ಸ್ಥಿತಿಯಲ್ಲಿ ದಂಪತಿಯ ಮೃತದೇಹಗಳು ಪತ್ತೆ - Mahanayaka
5:15 AM Wednesday 11 - December 2024

ಅಪಾರ್ಟ್ ಮೆಂಟ್’ನಲ್ಲಿ ನೇಣು‌ಬಿಗಿದ ಸ್ಥಿತಿಯಲ್ಲಿ ದಂಪತಿಯ ಮೃತದೇಹಗಳು ಪತ್ತೆ

maroli
10/10/2022

ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮರೋಳಿ ಬಳಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ದಂಪತಿಯ ಮೃತದೇಹಗಳು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಇಂದು ಬೆಳಗ್ಗೆ ಪತ್ತೆಯಾಗಿವೆ.

ಮೃತರನ್ನು ಮಲ್ಲಿಕಾರ್ಜುನ್ ಬಸವರಾಜ್(35) ಮತ್ತು ಸೌಮ್ಯಾ ನಾಯಕ್(34) ಎಂದು ಗುರುತಿಸಲಾಗಿದೆ.

ಈ ದಂಪತಿಯ ಮೃತದೇಹ ಅವರು ವಾಸಿಸುತ್ತಿದ್ದ ಅಪಾರ್ಟ್ ಮೆಂಟ್ ನ ಕೋಣೆಯಲ್ಲಿ ಫ್ಯಾನ್ ಗೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿವೆ.

ಇವರು ಒಂದೂವರೆ ವರ್ಷದ ಹಿಂದೆ ವಿವಾಹವಾಗಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ