ನಿರ್ಮಾಣ ಹಂತದ ಕಟ್ಟಡ ಕುಸಿತ: 6 ಮಂದಿ ಬಡ ಕಾರ್ಮಿಕರು ಬಲಿ - Mahanayaka

ನಿರ್ಮಾಣ ಹಂತದ ಕಟ್ಟಡ ಕುಸಿತ: 6 ಮಂದಿ ಬಡ ಕಾರ್ಮಿಕರು ಬಲಿ

pune
04/02/2022

ಪುಣೆ: ಯರವಾಡ ಪ್ರದೇಶದ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಛಾವಣಿ ಕುಸಿದ ಪರಿಣಾಮ 6 ಮಂದಿ ಮೃತಪಟ್ಟು ಹಲವರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ನಡೆದಿದೆ.

ಇಲ್ಲಿನ ಶಾಸ್ತ್ರಿ ನಗರದ ಲೈನ್ ಸಂಖ್ಯೆ8ರಲ್ಲಿ ಕಟ್ಟಡ ನಿರ್ಮಾಣ ಕಾರ್ಯ ನಡೆಯುತ್ತಿತ್ತು. ಗುರುವಾರ ರಾತ್ರಿ 11ಗಂಟೆಗೆ ಕಟ್ಟಡದ ಛಾವಣಿ ಕುಸಿಯಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಈವರೆಗೆ 6 ಕಾರ್ಮಿಕರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಅವರ ಮೃತದೇಹಗಳನ್ನು ಸಾಸೂನ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬಿಎಸ್ ಪಿ ಮಾತ್ರ ದೇಶಕ್ಕೆ ಅಚ್ಛೇದಿನ್ ತರಬಲ್ಲ ಪಕ್ಷ: ಮಾಯಾವತಿ

ನಾಪತ್ತೆಯಾಗಿದ್ದ ಎಎಸ್‌ ಐ ನದಿಯಲ್ಲಿ ಶವವಾಗಿ ಪತ್ತೆ

ಕಣ್ಣಿಗೆ ಜಿಗಣೆ ಹೋಗಿದೆ ಎಂದು ಕಣ್ಣಿನ ಗುಡ್ಡೆಯನ್ನೇ ಕಿತ್ತೆಸೆದ ವ್ಯಕ್ತಿ

ಶಾಲೆಗೆ ಹೋಗಿದ್ದ ಶಿಕ್ಷಕ ರಸ್ತೆ ಬದಿ ಅನುಮಾನಾಸ್ಪದ ಸಾವು

ಹಿಂದಿಯ ಖ್ಯಾತ ಕಿರುತೆರೆ ನಟಿಯ ಮೇಲೆ ಅತ್ಯಾಚಾರ: ದೂರು ದಾಖಲು

 

ಇತ್ತೀಚಿನ ಸುದ್ದಿ