ಧರ್ಮಸ್ಥಳ: ನೇತ್ರಾವತಿ ನದಿಗೆ ಹಾರಿದ ಮೈಸೂರಿನ ವ್ಯಕ್ತಿಯ ರಕ್ಷಣೆ

ಧರ್ಮಸ್ಥಳ: ವ್ಯಕ್ತಿಯೊಬ್ಬರು ನೇತ್ರಾವತಿ ಸೇತುವೆ ಮೇಲಿನಿಂದ ನೀರಿಗೆ ಹಾರಿ ಸಾವಿಗೆ ಶರಣಾಗಲು ಯತ್ನಿಸಿದ ಘಟನೆ ಧರ್ಮಸ್ಥಳ ಕನ್ಯಾಡಿ ಸಮೀಪ ನಡೆದಿದೆ
ಮೈಸೂರಿನ ಮಂಜು (52) ಎಂಬವರು ಈ ಕೃತ್ಯ ಎಸಗಿದವರಾಗಿದ್ದು, ಇವರು ಕೆಲವು ದಿನಗಳ ಹಿಂದೆ ಯಾವುದೋ ಕಾರಣಕ್ಕೆ ಮನೆಯವರೊಂದಿಗೆ ಗಲಾಟೆ ಮಾಡಿ ಮಾನಸಿಕವಾಗಿ ನೊಂದು ಕನ್ಯಾಡಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಜ.24ರಂದು ಸಂಜೆ ನೇತ್ರಾವತಿ ಸೇತುವೆ ಮೇಲಿನಿಂದ ನದಿಗೆ ಹಾರಿದಾಗ ಸ್ಥಳೀಯರು ರಕ್ಷಿಸಿದ್ದಾರೆ.ಅವರ ಕೈ,ಕಾಲಿಗೆ ಗಾಯವಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ಧರ್ಮಸ್ಥಳ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw