ನೇತ್ರಾವತಿ ನದಿಯಲ್ಲಿ ಯುವಕನ ಮೃತದೇಹ ಪತ್ತೆ: ಅಪಘಾತಕ್ಕೀಡಾಗಿ ನದಿಗೆ ಬಿದ್ದಿರುವ ಶಂಕೆ
ಯುವಕನೋರ್ವನ ಮೃತದೇಹ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಹಳೆಯ ಸೇತುವೆಯ ಬಳಿ ನೇತ್ರಾವತಿ ನದಿಯಲ್ಲಿ ನಡೆದಿದೆ.
ಮೃತರನ್ನು ಬಂಟ್ವಾಳ ತಾಲೂಕಿನ ಸಜಿಪ ನಿವಾಸಿ ರಾಜೇಶ್ ಪೂಜಾರಿ ಸ್ಥಾನಮನೆ(36) ಎಂದು ಗುರುತಿಸಲಾಗಿದೆ. ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಇಂದು ಬೆಳಗ್ಗೆ ದ್ವಿಚಕ್ರ ವಾಹನವೊಂದು ಅನಾಥ ಸ್ಥಿತಿಯಲ್ಲಿ ಬಿದ್ದುಕೊಂಡಿತು.
ಇದನ್ನು ನೋಡಿದ ಸಾರ್ವಜನಿಕರು ಸಂಶಯಗೊಂಡು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಅದರಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಅಗ್ನಿಶಾಮಕ ದಳವನ್ನು ಕರೆಸಿದರು. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ಮುಳುಗು ತಜ್ಞರು ನದಿಯಲ್ಲಿ ಹುಡುಕಾಟ ನಡೆಸಿದಾಗ ರಾಜೇಶ್ ಪೂಜಾರಿಯ ಮೃತದೇಹ ಪತ್ತೆಯಾಗಿದೆ.
ಗೂಡಿನಬಳಿಯ ಮುಳುಗುತಜ್ಞರಾದ ಇಕ್ಬಾಲ್ (ಬಾಬಿ), ಮುಹಮ್ಮದ್( ಮಮ್ಮು), ಹಾರಿಸ್, ಇಬ್ರಾಹೀಂ ಎಂ.ಕೆ. ಅವರು ನದಿಯಲ್ಲಿ ಶೋಧ ಮತ್ತು ಮೃತದೇಹ ಮೇಲಕ್ಕೆತ್ತಲು ಸಹಕಾರ ನೀಡಿದರು.
ರಾಜೇಶ್ ಅವರು ಕಳೆದ ರಾತ್ರಿ ತನ್ನ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವೇಳೆ ಸೇತುವೆಯಲ್ಲಿ ಅಪಘಾತಕ್ಕೀಡಾಗಿ ಅವರು ನದಿಗೆಸೆಯಲ್ಪಟ್ಟಿರುವ ಬಗ್ಗೆ ಸಂಶಯ ವ್ಯಕ್ತವಾಗಿದ್ದು, ಪೋಲಿಸರು ಈ ನಿಟ್ಟಿನಲ್ಲಿ ತನಿಖೆ ಆರಂಭಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw