‘ಕಾಂತಾರ’ ಚಿತ್ರಕ್ಕೆ ‘ಆಸ್ಕರ್ ಅವಾರ್ಡ್’ ನೀಡಲು ನೆಟ್ಟಿಗರ ಒತ್ತಾಯ

ಭಾರತೀಯ ಚಿತ್ರರಂಗದಲ್ಲಿ ಸಂಚಲನ ಸೃಷ್ಟಿಸಿರುವ ಕನ್ನಡದ ಕಾಂತಾರ ಚಿತ್ರಕ್ಕೆ ಆಸ್ಕರ್ ಅವಾರ್ಡ್ ನೀಡಬೇಕು ಎಂದು ನೆಟ್ಟಿಗರು ಒತ್ತಾಯಿಸಿದ್ದಾರೆ.
ಕರಾವಳಿಯ ಸಾಂಸ್ಕೃತಿಯನ್ನು ಹೊತ್ತ ‘ಕಾಂತಾರ’ ಸಿನಿಮಾ ನಿರೀಕ್ಷಿಸದ ರೀತಿಯಲ್ಲಿ ಏಕಾಏಕಿ ದೇಶಾದ್ಯಂತ ಜನಪ್ರಿಯತೆ ಪಡೆದುಕೊಂಡಿತು. ಈಗಲೂ ದೇಶಾದ್ಯಂತ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಕಾಂತಾರ ಚಿತ್ರಕ್ಕೆ ಆಸ್ಕರ್ ಅವಾರ್ಡ್ ನೀಡುವಂತೆ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಒತ್ತಾಯಿಸಿದ್ದಾರೆ.
ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರ ಭಾರತೀಯ ಚಿತ್ರರಂಗದಲ್ಲಿ ಹೊಸ ಸಾಧನೆಗೆ ಮುನ್ನುಡಿ ಬರೆದಿದ್ದು, ಕೆಜಿಎಫ್ ಚಿತ್ರದ ದಾಖಲೆಗಳನ್ನೂ ಧೂಳೀಪಟ ಮಾಡುತ್ತಿದೆ. ವಿವಿಧ ಭಾಷೆಗಳಿಗೆ ಡಬ್ ಆಗಿರುವ ಕಾಂತಾರ, ಬಾಲಿವುಡ್ ಸೇರಿದಂತೆ ವಿವಿಧ ಭಾಷೆಗಳ ಚಿತ್ರಗಳಿಗೆ ನಡುಕ ಹುಟ್ಟಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka