ಎಪ್ರಿಲ್ 1ರೊಳಗೆ ಟೋಲ್ ಶುಲ್ಕ ಸಂಬಂಧ ಹೊಸ ರಾಷ್ಟ್ರೀಯ ನೀತಿ ಪ್ರಕಟ?

ಟೋಲ್ ಶುಲ್ಕ ಸಂಬಂಧ ಹೊಸ ರಾಷ್ಟ್ರೀಯ ನೀತಿಯನ್ನು ಎ. 1ರೊಳಗೆ ಪ್ರಕಟಿಸುವುದಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ. ಈ ನೀತಿ ಜಾರಿಯ ಬಳಿಕ ಟೋಲ್ ಹೆಚ್ಚಾಯಿತು ಎಂದು ವಾಹನಗಳ ಚಾಲಕರು -ಮಾಲಕರು ದೂರುವ ಪ್ರಮೇಯವೇ ಉದ್ಭವಿಸುವುದಿಲ್ಲ. ಶುಲ್ಕದಲ್ಲಿ ರಿಯಾಯಿತಿ ದೊರೆಯಲಿದೆ ಎಂದು ಅವರು ಭರವಸೆ ನೀಡಿದ್ದಾರೆ.
ಪ್ರಸ್ತುತ ಇರುವ ಹೆದ್ದಾರಿ ಶುಲ್ಕ ನೀತಿಯಿಂದ ಉಂಟಾಗುತ್ತಿರುವ ತೊಂದರೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಹೊಸ ನೀತಿಯನ್ನು ಜಾರಿ ಮಾಡಲಾಗುವುದು. ಸದ್ಯ ಸಂಸತ್ ಅಧಿವೇಶನ ನಡೆಯುತ್ತಿರುವುದರಿಂದ ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡುವುದಿಲ್ಲ ಎಂದು ಖಾಸಗಿ ಸುದ್ದಿವಾಹಿನಿಯ ಕಾರ್ಯಕ್ರಮವೊಂದರಲ್ಲಿ ಸಚಿವ ಗಡ್ಕರಿ ಹೇಳಿದ್ದಾರೆ.
“ಎ. 1ರ ವೇಳೆಗೆ ಹೊಸ ಟೋಲ್ ನೀತಿಯನ್ನು ಪ್ರಕಟಿಸಲಾಗುತ್ತದೆ. ಆ ಬಳಿಕ ನೀವು ಟೋಲ್‌ಗಳ ಬಗ್ಗೆ ದೂರು ಹೇಳುವ ಸಂದರ್ಭವೇ ಉದ್ಭವಿಸುವುದಿಲ್ಲ. ಜನರು ಟೋಲ್ ಬಗ್ಗೆ ಚಿಂತಿಸಬೇಕಾದ ಪರಿಸ್ಥಿತಿ ಆ ಬಳಿಕ ಇರುವುದಿಲ್ಲ. ಏಕೆಂದರೆ ಶುಲ್ಕದಲ್ಲಿ ತುಂಬಾ ರಿಯಾಯಿತಿ ಸಿಗಲಿದೆ. ಇದಕ್ಕೆ ಸಂಬಂಧಿಸಿದ ರಾಷ್ಟ್ರೀಯ ನೀತಿ ಸಿದ್ಧವಾಗಿದೆ’ ಎಂದು ಗಡ್ಕರಿ ತಿಳಿಸಿದ್ದಾರೆ.
ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಸಂಗ್ರಹವು ನಿರಂತರವಾಗಿ ನಡೆಯಲಿದೆ. ಅದನ್ನು ರದ್ದುಗೊಳಿಸುವ ಯಾವುದೇ ಪ್ರಸ್ತಾವ ಸರಕಾರದ ಮುಂದಿಲ್ಲ ಎಂದು ಇತ್ತೀಚೆಗಷ್ಟೇ ಗಡ್ಕರಿ ಸಂಸತ್ತಿಗೆ ಮಾಹಿತಿ ನೀಡಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj