ಜಲೀಲ್ ಹತ್ಯೆ ಪ್ರಕರಣ: 4 ಠಾಣಾ ವ್ಯಾಪ್ತಿಯ ಬೈಕ್ ಸವಾರರಿಗೆ ಹೊಸ ಆದೇಶ ಜಾರಿ

surathkal
26/12/2022

ಮಂಗಳೂರು:  ಮಂಗಳೂರಿನ ಕಾಟಿಪಳ್ಳ ಜಲೀಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಠಾಣಾ ವ್ಯಾಪ್ತಿಗಳಲ್ಲಿ 144 ನಿಷೇಧಾಜ್ಞೆ ಮುಂದುವರಿಕೆ ಮಾಡಲಾಗಿದೆ.

ಡಿ.29ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಮುಂದುವರಿಕೆಯಾಗಲಿದೆ.  ನಿಷೇಧಾಜ್ಞೆ ಸಮಯದಲ್ಲಿ ಬೈಕ್ ಸವಾರರಿಗೆ ಹೊಸ ಆದೇಶ ಜಾರಿ ಮಾಡಲಾಗಿದ್ದು, ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಸಂಚಾರ ‌ನಿರ್ಬಂಧ ಹೇರಲಾಗಿದೆ.

ಸಂಜೆ‌ 6 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಈ ನಿರ್ಬಂಧ ಅನ್ವಯವಾಗಲಿದ್ದು, ಮಹಿಳೆಯರು, 60 ವರ್ಷ ಮೇಲ್ಪಟ್ಟ ಹಿರಿಯರು ಹಾಗೂ 18 ವರ್ಷ ಕೆಳಗಿನ ಮಕ್ಕಳಿಗೆ ವಿನಾಯಿತಿ ನೀಡಲಾಗಿದೆ.  ಉಳಿದ ಪುರುಷ ಹಿಂಬದಿ ಸವಾರರು ದ್ವಿಚಕ್ರ ವಾಹನದಲ್ಲಿ ಸಂಚರಿಸುವುದು ನಿರ್ಬಂಧ ಹೇರಲಾಗಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತು ತುರ್ತು ಸಂಧರ್ಭ ಸಂಚಾರಕ್ಕೆ ‌ನಿರ್ಬಂಧ ಇಲ್ಲ. ಸುರತ್ಕಲ್, ಕಾವೂರು, ಬಜಪೆ ಮತ್ತು ಪಣಂಬೂರು ಠಾಣಾ ವ್ಯಾಪ್ತಿಗೆ ಮಾತ್ರ ಈ ಆದೇಶ ಅನ್ವಯವಾಗಲಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version