ಮುಮ್ತಾಝ್ ಅಲಿ ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು: 6 ಮಂದಿಯ ವಿರುದ್ಧ ದೂರು ದಾಖಲು
ಮಂಗಳೂರು: ಕೂಳೂರು ಸೇತುವೆ ಬಳಿ ಮಾಜಿ ಶಾಸಕ ಮೊಯ್ದಿನ್ ಬಾವ ಅವರ ಸಹೋದರ ಹಾಗೂ ಉದ್ಯಮಿ, ಸಮಾಜಸೇವಕ ಮುಮ್ತಾಝ್ ಅಲಿ ಅವರು ನಾಪತ್ತೆಯಾಗಿರುವ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ.
ಮುಮ್ತಾಝ್ ಅಲಿ ಅವರನ್ನು ನಿರಂತರವಾಗಿ ಬ್ಲ್ಯಾಕ್ ಮೇಲ್ ಮಾಡಿರುವ ವಿಚಾರ ಇದೀಗ ಬೆಳಕಿಗೆ ಬಂದಿದ್ದು, ಮುಮ್ತಾಝ್ ಅಲಿ ಅವರಿಂದ ಲಕ್ಷಾಂತರ ರೂಪಾಯಿ ಹಣವನ್ನು ಬೆದರಿಸಿ ಪಡೆಯಲಾಗಿದೆ ಎಂದು ದೂರು ದಾಖಲಾಗಿದೆ.
ಮುಮ್ತಾಝ್ ಅಲಿ ಅವರ ಸಹೋದರ ಹೈದರ್ ಅಲಿ ಎಂಬವರು ಕಾವೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಮಹಿಳೆಯನ್ನು ಬಳಸಿಕೊಂಡು ದುರುದ್ದೇಶದಿಂದ ಆತ್ಮಹತ್ಯೆಗೆ ಪ್ರಚೋದನೆ ನೀಡಲಾಗಿದೆ ಎಂದು ಆರೋಪಿಸಿದ್ದಾರೆ.
ರೆಹಮತ್ ಸೇರಿದಂತೆ ಅಬ್ದುಲ್ ಸತ್ತಾರ್, ಶಾಫಿ, ಮುಸ್ತಫಾ, ಶುಹೈಬ್, ಸತ್ತಾರ್ ಹಾಗೂ ಕಾರು ಚಾಲಕ ಸಿರಾಜ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.
ಸಮಾಜ ಸೇವೆ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ತೊಡಗಿಕೊಂಡಿರುವ ಮುಮ್ತಾಝ್ ಅಲಿ ಅವರು ಗೌರವಾನ್ವಿತ ವ್ಯಕ್ತಿಯಾಗಿದ್ದು, ಹಲವು ಧಾರ್ಮಿಕ ಸಂಘಟನೆಗಳ ಮುಖ್ಯಸ್ಥರು ಕೂಡ ಆಗಿದ್ದರು. ಅವರ ಪ್ರಸಿದ್ಧಿ ಹಾಳುಮಾಡುವುದಾಗಿ ಬೆದರಿಸಿ, ಆತ್ಮಹತ್ಯೆಗೆ ಪ್ರಚೋದನೆ ನೀಡಲಾಗಿದೆ ಅಂತ ದೂರಿನಲ್ಲಿ ತಿಳಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: