ಹೊಸ ವರ್ಷಾಚರಣೆ: ಕೊವಿಡ್ ಬಗ್ಗೆ ಎಚ್ಚರಿಕೆ ವಹಿಸಲು ಸೂಚನೆ
ಮತ್ತೆ ಕೊರೊನಾ ಪ್ರಕರಣ ಕೆಲ ಕಡೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಎಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಇಂದು ಸೂಚಿಸಿದ್ದಾರೆ.
ಶಾಪಿಂಗ್ ಮಾಲ್, ಕಚೇರಿಗಳು, ಸಿನೆಮಾ ಹಾಲ್, ಪಬ್, ಬಾರ್, ರೆಸ್ಟೋರೆಂಟ್ ಅದೇರೀತಿ ಬಸ್, ರೈಲು, ಮಟ್ರೋ, ವಿಮಾನ ಯಾನದ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಅಗತ್ಯವಾಗಿದೆ. ಆರೋಗ್ಯ ಸಮಸ್ಯೆ ಇರುವವರು, ವೃದ್ಧರು ಒಳಾಂಗಣದಲ್ಲಿದ್ದಾಗಲೂ ಮಾಸ್ಕ್ ಧರಿಸುವುದು ಉತ್ತಮ ಎಂದವರು ತಿಳಿಸಿದ್ದಾರೆ.
ಸಾರ್ವಜನಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಆದಷ್ಟು ಹೊರಾಂಗಣದಲ್ಲಿ ಆಯೋಜಿಸಬೇಕು. ಕೈಗಾರಿಕೆ ಸಂಸ್ಥೆ, ಗಾರ್ಮೆಂಟ್ಸ್ ಸಹಿತ ಇತರ ಕಾರ್ಖಾನೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಕಡ್ಡಾಯವಾಗಿ ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕು ಮತ್ತು ಮಾಸ್ಕ್ ಧರಿಸಬೇಕು. ಹೆಚ್ಚಿನ ಜನರು ಗುಂಪುಗೂಡುವಿಕೆಯನ್ನು, ವಿಶೇಷವಾಗಿ ಒಳಾಂಗಣಗಳಲ್ಲಿ ಗುಂಪುಗೂಡುವಿಕೆಯನ್ನು ಕಟ್ಟುನಿಟ್ಟಾಗಿ ತಡೆಗಟ್ಟಬೇಕು ಎಂದು ಅವರು ಸೂಚಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka