ನ್ಯೂ ಇಯರ್ ಪಾರ್ಟಿ ಮುಗಿಸಿ ಬರುತ್ತಿದ್ದ ವೇಳೆ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು
ಕಾರವಾರ: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಾಳೆಗುಳಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ.
ಮೃತರನ್ನು ಅರುಣ್ ಪಾಂಡ್ಯನ್, ನಿಪುಲ್, ಮೊಹಮ್ಮದ್ ಶೇಖರನ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಮೃತರು ತಮಿಳುನಾಡು ಮೂಲದವರು ಎಂದು ತಿಳಿದು ಬಂದಿದೆ.
ಗೋವಾದಲ್ಲಿ ಪಾರ್ಟಿ ಮುಗಿಸಿಕೊಂಡು ಅಂಕೋಲ ಭಾಗದಿಂದ ಯಲ್ಲಾಪುರ ಕಡೆಗೆ ಕಾರು ತೆರಳುತ್ತಿದ್ದು, ಈ ವೇಳೆ ಹುಬ್ಬಳ್ಳಿಯಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಮುಖಾಮುಖಿ ಡಿಕ್ಕಿಯಾಗಿದೆ.
ಘಟನಾ ಸ್ಥಳಕ್ಕೆ ಅಂಕೋಲಾ ಪೊಲೀಸ್ಉ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಅಂಕೋಲಾ ತಾಲೂಕು ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka