ಮುಂದಿನ ಟಾರ್ಗೆಟ್ ಈಶ್ವರಪ್ಪ, ಜಗದೀಶ್ ಶೆಟ್ಟರ್? | ಯಡಿಯೂರಪ್ಪರ  ಬಳಿಕ ನಿವೃತ್ತರಾಗುತ್ತಾರಾ ಹಿರಿಯ ನಾಯಕರು? - Mahanayaka
12:46 PM Thursday 14 - November 2024

ಮುಂದಿನ ಟಾರ್ಗೆಟ್ ಈಶ್ವರಪ್ಪ, ಜಗದೀಶ್ ಶೆಟ್ಟರ್? | ಯಡಿಯೂರಪ್ಪರ  ಬಳಿಕ ನಿವೃತ್ತರಾಗುತ್ತಾರಾ ಹಿರಿಯ ನಾಯಕರು?

next target eshwarappa jagadish shettar
29/07/2021

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾಗಿರುವ ಆಡಿಯೋ ವೈರಲ್ ಆದ ಬಳಿಕ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳು. ಆ ಆಡಿಯೋದಲ್ಲಿ ಹೇಳಿರುವ ಹೇಳಿಕೆಗೆ ಪೂರಕವಾಗಿಯೇ ನಡೆಯುತ್ತಿದೆ.

ಬಿಜೆಪಿಯ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲಾಗಿದೆ. ಇದರ ಜೊತೆಗೆ ಈಶ್ವರಪ್ಪ, ಜಗದೀಶ್ ಶೆಟ್ಟರ್ ಅವರಿಗೆ ಮಂತ್ರಿ ಸ್ಥಾನ ನೀಡದಿರಲು ಪಕ್ಷ ತೀರ್ಮಾನಿಸಿದೆ ಎಂದೂ ಹೇಳಲಾಗುತ್ತಿದೆ.

ಇನ್ನೂ ಬಸವರಾಜ್ ಬೊಮ್ಮಾಯಿ ಸಿಎಂ ಆಗುತ್ತಿದ್ದಂತೆಯೇ ಹಿರಿಯ ನಾಯಕರು ಹಿಂದಕ್ಕೆ ಸರಿಯುತ್ತಿರುವುದು ಕಂಡು ಬಂದಿದೆ. ಮಾಧ್ಯಮಗಳ ಜೊತೆಗೆ ಮಾತನಾಡಿದ್ದ ಕೆ.ಎಸ್.ಈಶ್ವರಪ್ಪ, ಪಕ್ಷದಲ್ಲಿ ಇನ್ನೂ ಬದಲಾವಣೆಗಳಾಗುವುದಿದೆ, ಕಾದು ನೋಡೋಣ ಎಂದು ಅವರು ಹೇಳಿದರು.

ಇನ್ನೂ ಬುಧವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ್ದ ಜಗದೀಶ್ ಶೆಟ್ಟರ್,  ನಾನು ಈ ಹಿಂದೆ ಸಭಾಧ್ಯಕ್ಷನಾಗಿ, ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಈಗ ಕಿರಿಯರಾದ ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾರೆ. ಅವರ ಸಂಪುಟದಲ್ಲಿ ಸಚಿವನಾಗಿ ಕೆಲಸ ಮಾಡುವ ಆಕಾಂಕ್ಷೆ ನನಗಿಲ್ಲ ಎಂದು ಹೇಳಿದ್ದಾರೆ.




ಮಾಜಿ ಸಿಎಂ ಯಡಿಯೂರಪ್ಪನವರು ಕೂಡ  ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಂದರ್ಭದಲ್ಲಿ ಪಕ್ಷದ ವಿರುದ್ಧ ಏನೂ ಮಾತನಾಡದೇ ರಾಜೀನಾಮೆ ನೀಡಿದ್ದಾರೆ. ಯಡಿಯೂರಪ್ಪನವರ ಬೆನ್ನ ಹಿಂದೆ ಇನ್ನಷ್ಟು ನಾಯಕರು ನಿವೃತ್ತಿಯಾಗುವ ಸಾಲಿನಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ಬಿಜೆಪಿಯಲ್ಲಿ ಹಿರಿಯ ನಾಯಕರನ್ನು ಪಕ್ಷದಿಂದ ಹೊರಗಿಟ್ಟು ಕೇವಲ ಪಕ್ಷ ಸಂಘಟನೆ ಮಾಡಿಸುವುದು. ಯುವ ನಾಯಕರಿಗೆ ಅಧಿಕಾರ ನೀಡುವುದು ಬಿಜೆಪಿ ಪ್ಲಾನ್ ಎಂದು ಹೇಳಲಾಗುತ್ತಿದೆ. ಆದರೆ, ಪಕ್ಷವನ್ನು ತಳಮಟ್ಟದಿಂದ ಸಂಘಟನೆ ಮಾಡಿ ಅಧಿಕಾರ ತಂದು ಕೊಟ್ಟ ಬಳಿಕ, ನಿನ್ನೆ ಮೊನ್ನೆ ಪಕ್ಷಕ್ಕೆ ಬಂದ ಯುವಕರಿಗೆ ಅಧಿಕಾರ ನೀಡಿದರೆ, ಅಧಿಕಾರ ವಂಚಿತ ನಾಯಕರು ಸುಮ್ಮನಿರುತ್ತಾರೆಯೇ?ಎನ್ನುವ ಪ್ರಶ್ನೆಗಳು ಈಗ ಕೇಳಿ ಬಂದಿದೆ. ಹಿರಿಯ ನಾಯಕರ ವೀಕ್ ನೆಸ್ ಗಳನ್ನು ನೋಡಿ ಬಿಜೆಪಿ ಹೈಕಮಾಂಡ್ ಆಟವಾಡುತ್ತಿದೆ ಎನ್ನುವ ಶಂಕೆ ಕೂಡ ವ್ಯಕ್ತವಾಗಿದೆ.

ಬಿಜೆಪಿಯಲ್ಲಿ ನಡೆಯುತ್ತಿರುವ ವಿದ್ಯಮಾನಗಳೆಲ್ಲವೂ ಗೌಪ್ಯವಾಗಿಯೇ ನಡೆಯುತ್ತಿದ್ದವು. ಆದರೆ, ನಳಿನ್ ಕುಮಾರ್ ಅವರದ್ದು ಎನ್ನಲಾಗಿರುವ ಆಡಿಯೋ ಬಿಡುಗಡೆಯಾದ ಕಾರಣ ಇದು ಇಡೀ ರಾಜ್ಯ ಮಾತ್ರವಲ್ಲದೇ ದೇಶಕ್ಕೆ ತಲುಪಿದೆ. ಹಿರಿಯ ನಾಯಕರ ಕಣ್ಣೀರು ಬಿಜೆಪಿಗೆ ತಟ್ಟದಿರುತ್ತದೆಯೇ? ಎಂಬ ಭಾವನಾತ್ಮಕ ಮಾತುಗಳು ಕೂಡ ಕೇಳಿ ಬಂದಿದೆ.

ಇನ್ನಷ್ಟು ಸುದ್ದಿಗಳು…

ಬಿಜೆಪಿಗೆ ತಲೆ ನೋವಾದ ಸ್ವಾಮೀಜಿಗಳು | ಈಶ್ವರಪ್ಪರನ್ನು ಡಿಸಿಎಂ ಮಾಡಿ, ಇಲ್ಲವೇ ಪರಿಣಾಮ ಎದುರಿಸಿ ಎಂದು ಬಿಜೆಪಿಗೆ ಬೆದರಿಕೆ

ಏರ್ಟೆಲ್ ಗ್ರಾಹಕರಿಗೆ ಶಾಕಿಂಗ್ ನ್ಯೂಸ್ | ನಾಳೆಯಿಂದ ಹೊಸ ಬದಲಾವಣೆ

 

ಇತ್ತೀಚಿನ ಸುದ್ದಿ