ಮಾರ್ಚ್ 19ರ ಲಂಡನ್ ನಲ್ಲಿ ಭಾರತೀಯ ಹೈಕಮಿಷನ್ ಮೇಲಿನ ದಾಳಿ: 5 ಸಿಸಿಟಿವಿ ದೃಶ್ಯಗಳನ್ನು ಬಿಡುಗಡೆ ಮಾಡಿದ ಎನ್ ಐಎ
ಲಂಡನ್ ಲ್ಲಿರುವ ಭಾರತೀಯ ಹೈಕಮಿಷನ್ ಮೇಲೆ ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಸೋಮವಾರ ಈ ದಾಳಿಯ ಐದು ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದೆ.
ಇದರ ಜೊತೆಗೆ ಅಪರಾಧಿಗಳನ್ನು ಗುರುತಿಸಲು ಸಾರ್ವಜನಿಕರ ಸಹಾಯವನ್ನು ಕೋರಿದೆ. ಮಾರ್ಚ್ 19ರಂದು ಭಾರತೀಯ ರಾಯಭಾರ ಕಚೇರಿ ಮೇಲೆ ದಾಳಿ ನಡೆದಿತ್ತು. ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಈ ದೃಶ್ಯದಲ್ಲಿ ಕಂಡುಬರುವ ವ್ಯಕ್ತಿಗಳ ಬಗ್ಗೆ ಯಾವುದೇ ಮಾಹಿತಿಯನ್ನು ಒದಗಿಸುವಂತೆ ಎನ್ಐಎ ಸಾರ್ವಜನಿಕರ ಎಲ್ಲಾ ಸದಸ್ಯರನ್ನು ವಿನಂತಿಸುತ್ತದೆ.
+91 7290009373 ನಲ್ಲಿ ವಾಟ್ಸಾಪ್ ನಲ್ಲಿ ಮಾಹಿತಿಯನ್ನು ಒದಗಿಸಬಹುದು. ಮಾಹಿತಿದಾರರ ಗುರುತನ್ನು ಗೌಪ್ಯವಾಗಿಡಲಾಗುವುದು’ ಎಂದು ಎನ್ಐಎ ಟ್ವೀಟ್ ಮಾಡಿದೆ.
ಪ್ರತಿಭಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ವಿಶೇಷ ಸೆಲ್ ಕೂಡ ಎಫ್ಐಆರ್ ದಾಖಲಿಸಿತ್ತು. ನಂತರ, ಕಾನೂನು ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯವು ದೆಹಲಿ ಪೊಲೀಸರಿಗೆ ಸೂಚನೆ ನೀಡಿದ ನಂತರ ಎನ್ಐಎ ಈ ಪ್ರಕರಣವನ್ನು ವಹಿಸಿಕೊಂಡಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw