ನಿದ್ದೆಗೆ ಜಾರಿದ ಕಾರು ಚಾಲಕ:  ಭೀಕರ ಅಪಘಾತದಲ್ಲಿ 7 ಮಂದಿ ಸಾವು - Mahanayaka
7:58 PM Thursday 12 - December 2024

ನಿದ್ದೆಗೆ ಜಾರಿದ ಕಾರು ಚಾಲಕ:  ಭೀಕರ ಅಪಘಾತದಲ್ಲಿ 7 ಮಂದಿ ಸಾವು

accident
14/01/2022

ದಾವಣಗೆರೆ: ಇಂಡಿಕಾ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾದ ಪರಿಣಾಮ 7 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಕಣಕಟ್ಟೆ ಟೋಲ್ ಎನ್ ಹೆಚ್ 13ರಲ್ಲಿ ನಡೆದಿದೆ.

ವರದಿಗಳ ಪ್ರಕಾರ ಕಾರು ಚಾಲಕ ಮದ್ಯದ ನಶೆಯಿಂದಾಗಿ ಕಾರು ಚಾಲನೆಯಲ್ಲಿದ್ದಾಗಲೇ ನಿದ್ರೆಗೆ ಜಾರಿದ್ದರಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

ಮೃತರ ಮಲ್ಲನ ಗೌಡ(22), ಸಂತೋಷ್(21), ಸಂಜೀವ್(20), ಜೈಭೀಮ್(18), ರಾಘು(23), ಸಿದ್ದೇಶ್(20), ವೇದಮೂರ್ತಿ(18), ಮೃತಪಟ್ಟವರು ಎಂದು ತಿಳಿದು ಬಂದಿದೆ.

ಮೃತರಲ್ಲಿ 4 ಜನ ಯಾದಗಿರಿಯ ಶಾಹಪುರದವರಾಗಿದ್ದು , 2 ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮೂಲದವರು, 01 ವಿಜಯಪುರ ಜಿಲ್ಲೆಯ ತಾಳಿಕೋಟೆಯವನೆಂದು ತಿಳಿದುಬಂದಿದೆ.

ಮಾಹಿತಿ ತಿಳಿದು ಘಟನ ಸ್ಥಳಕ್ಕೆ ದಾವಣಗೆರೆ ಎಸ್ಪಿ ಸಿಬಿ ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಬೆಳಗಿನ ಜಾವ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ ಎನ್ನಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ರಿಯಾಲಿಟಿ ಶೋ ಸ್ಪರ್ಧಿ ಸಮನ್ವಿ ಸಾವು

ಗಿಳಿ, ಕೌಜುಗ, ಆಮೆ, ಮೊಲ ಮಾರಾಟ ಮಾಡುತ್ತಿದ್ದ ವ್ಯಕ್ತಿ ಅರೆಸ್ಟ್!

ಕಳ್ಳನನ್ನು 1 ಕಿ.ಮೀ. ದೂರ ಬೆನ್ನಟ್ಟಿ ಹಿಡಿದ ಪೊಲೀಸ್ | ವಿಡಿಯೋ ವೈರಲ್

ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಬಾಲಕಿಯ ಮೇಲೆ ಅತ್ಯಾಚಾರ!

ಮೇಕೆದಾಟು ಪಾದಯಾತ್ರೆಗೆ ನಿರ್ಬಂಧ ವಿಧಿಸಿ ಆದೇಶ

ಇತ್ತೀಚಿನ ಸುದ್ದಿ