ನೈಟ್ ಕರ್ಫ್ಯೂ ಆದೇಶ ಮರುಪರಿಶೀಲನೆ ಇಲ್ಲ: ಸಿಎಂ ಬೊಮ್ಮಾಯಿ
ಮೈಸೂರು: ಜನರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ನೈಟ್ ಕರ್ಫ್ಯೂ ನಿರ್ಧಾರ ಕೈಗೊಳ್ಳಲಾಗಿದೆ. ಈ ಆದೇಶವನ್ನು ಮರುಪರಿಶೀಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸ್ಪಷ್ಟಪಡಿಸಿದ್ದಾರೆ.
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾತ್ರಿ ಕರ್ಫ್ಯೂ ಆದೇಶ ಹೊರಡಿಸಿದ್ದು, ಆದೇಶದ ವಿರುದ್ಧ ಪಬ್ ಮಾಲೀಕರು ಮತ್ತು ಹೋಟೆಲ್ ಮಾಲೀಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ, ನಿರ್ಧಾರವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಭಾನುವಾರ ಸ್ಪಷ್ಟನೆ ನೀಡಿರುವ ಅವರು, ನೆರೆಯ ರಾಜ್ಯಗಳಲ್ಲಿ ಓಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕಠಿಣ ನಿರ್ಬಂಧಗಳನ್ನು ಹೇರುವುದು ಅನಿವಾರ್ಯವಾಗಿದೆ. ಈ ಹಿನ್ನೆಲೆಯಲ್ಲಿ ನೈಟ್ ಕರ್ಫ್ಯೂ ಸೇರಿ ರಾಜ್ಯಾದ್ಯಂತ ಜಾರಿಗೊಳಿಸಲು ಉದ್ದೇಶಿಸಿರುವ ಕಠಿಣ ನಿರ್ಬಂಧ ಕುರಿತು ಪುನರ್ ಪರಿಶೀಲನೆ ಇಲ್ಲ ಎಂದು ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮೇಲ್ಜಾತಿಯ ಮಹಿಳೆ ತಯಾರಿಸಿದ ಆಹಾರ ನಾವು ಸೇವಿಸುವುದಿಲ್ಲ | ದಲಿತ ವಿದ್ಯಾರ್ಥಿಗಳಿಂದ ಪಟ್ಟು
ಸನ್ನಿ ಲಿಯೋನ್ ಮೇಲೆ ಅರ್ಚಕರ ಕೆಂಗಣ್ಣು: ಕ್ಷಮೆ ಕೇಳದಿದ್ದರೆ ಭಾರತದಲ್ಲಿರಲು ಬಿಡಲ್ಲ ಎಂದು ಬೆದರಿಕೆ
ಕರ್ನಾಟಕ ಬಂದ್ ನಡುವೆಯೇ ಇನ್ನೊಂದು ಶಾಕ್: ಡಿ.31ರಿಂದ ಕಸ ಗುತ್ತಿಗೆದಾರ ಸಂಘದಿಂದ ಅನಿರ್ದಿಷ್ಠಾವಧಿ ಮುಷ್ಕರ
ಅಭಿಮಾನಿಗಳಿಗೆ ಕೈಮುಗಿದು ಬೇಡಿಕೊಂಡ ನಿಖಿಲ್ ಕುಮಾರಸ್ವಾಮಿ | ಕಾರಣ ಏನು ಗೊತ್ತಾ?
ನಾನು ದೊಡ್ಡ ಪೋಲಿ ಆಟ ಆಡಿ ಬಂದವನು | ಹಂಸಲೇಖ