ನೈಟ್ ಕರ್ಫ್ಯೂಗೆ ಪದೇ ಪದೇ ವಿರೋಧ ಮಾಡೋದು ಸರಿಯಲ್ಲ: ಸಚಿವ ಕೆ.ಸುಧಾಕರ್ - Mahanayaka
6:52 PM Friday 20 - September 2024

ನೈಟ್ ಕರ್ಫ್ಯೂಗೆ ಪದೇ ಪದೇ ವಿರೋಧ ಮಾಡೋದು ಸರಿಯಲ್ಲ: ಸಚಿವ ಕೆ.ಸುಧಾಕರ್

k sudhakar
28/12/2021

ಬೆಂಗಳೂರು: ನೈಟ್ ಕರ್ಫ್ಯೂಗೆ ಪದೇ ಪದೇ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ, ಎಲ್ಲ ಸಾಧಕ-ಬಾಧಕ ನೋಡಿಯೇ ಸರ್ಕಾರ ನೈಟ್ ಕರ್ಫ್ಯೂ ನಿರ್ಧಾರ ಮಾಡಿದೆ ಎಂದು  ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದರು.

ಸುದ್ದಿಗಾರರೊಂದಿಗೆ ಈ ಬಗ್ಗೆ ಮಾತನಾಡಿದ ಅವರು, 2ನೇ ಅಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲಾತ್ತು. ಯಾಕೆ ಲಾಕ್ ಡೌನ್ ಆಗಿತ್ತೆಂದು ತಿಳಿದುಕೊಳ್ಳಬೇಕು. ಹತ್ತು ದಿನಗಳ ಮಾರ್ಗಸೂಚಿ ಬಿಡುಗಡೆ ಮಾಡಿದ್ದೇವೆ. ಇದರ ಪಾಲನೆ ಒಳ್ಳೆಯ ರೀತಿಯಲ್ಲಿ ಆಗಬೇಕು. ಜನರು ಸಹಕಾರ ಕೊಡಬೇಕು. ಹತ್ತು ದಿನಗಳ ಕಾಲ ಪರಿಸ್ಥಿತಿ ಗಮನಿಸುತ್ತೇವೆ. ನಂತರ ಸಿಎಂ, ತಜ್ಞರ ಜತೆ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ  ಎಂದು ಅವರು ಹೇಳಿದರು.

ಹೊಸ ವರ್ಷಾಚರಣೆಯ ನಡುವೆಯೇ ಇಂದಿನಿಂದ ಸರ್ಕಾರ ನೈಟ್ ಕರ್ಫ್ಯೂ ಜಾರಿ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಹೊಟೇಲ್ ಮಾಲಿಕರು, ಪಬ್ ಮಾಲಿಕರು, ವ್ಯಾಪಾರಿಗಳು, ಬೀದಿ ವ್ಯಾಪಾರಿಗಳು ಸರ್ಕಾರದ ನಿರ್ಧಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೈಟ್ ಕರ್ಫ್ಯೂ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿ ಮಹಿಳೆಯ ಬರ್ಬರ ಹತ್ಯೆ

ಸೆಲ್ಫಿ ತೆಗೆದುಕೊಳ್ಳಲು ಬಂದ ಬೆಂಬಲಿಗನ ಮೇಲೆ ತಿರುಗಿ ಬಿದ್ದ ಡಿ.ಕೆ.ಶಿವಕುಮಾರ್

ಸನ್ನಿ ಲಿಯೋನ್ ಗೆ ಎಚ್ಚರಿಕೆ ನೀಡಿದ ಮಧ್ಯಪ್ರದೇಶದ ಗೃಹ ಸಚಿವ!

ಮಂಡಿ ನೋವಿಗೆ ನಾಟಿ ಚಿಕಿತ್ಸೆಯ ಮೊರೆ ಹೋದ ಸಿಎಂ ಬೊಮ್ಮಾಯಿ

ಡ್ರಗ್ಸ್ ನೀಡಿ ನನ್ನ ಮಗಳಿಗೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ:  ಮಂಗಳೂರು ಕಮಿಷನರ್ ಗೆ ದೂರು ನೀಡಿದ ತಾಯಿ

90 ಎಲೆಕ್ಟ್ರಿಕ್ ಬಸ್ ​ಗಳಿಗೆ ಸಿಎಂ ಬೊಮ್ಮಾಯಿ ಚಾಲನೆ: ಈ ಬಸ್ಸಿನ ವಿಶೇಷತೆ ಏನು?

ಇತ್ತೀಚಿನ ಸುದ್ದಿ