ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ | ದ.ಕ.ಸೇರಿದಂತೆ 8 ಗಡಿ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ
ಬೆಂಗಳೂರು: ಕೊರೊನಾ ಪಾಸಿಟಿವಿಟಿ ದರ ಮತ್ತೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಹಾಗೂ ದಕ್ಷಿಣ ಕನ್ನಡ ಸೇರಿದಂತೆ 8 ಗಡಿ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ವಿಧಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಕೊವಿಡ್ ನಿರ್ವಹಣೆ ಸಂಬಂಧ ನಡೆದ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಸದ್ಯ ಇರುವ ನೈಟ್ ಕರ್ಫ್ಯೂ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯ ವರೆಗೆ ಜಾರಿಯಲ್ಲಿರಲಿದೆ. ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಿರುವ ಮಹಾರಾಷ್ಟ್ರ ಹಾಗೂ ಕೇರಳ ಗಡಿ ಜಿಲ್ಲೆಗಳಲ್ಲಿ ಶನಿವಾರ ಹಾಗೂ ಭಾನುವಾರ ವಾರಾಂತ್ಯ ಕರ್ಫ್ಯೂ ವಿಧಿಸಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.
ಗಡಿ ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ, ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ತೀರ್ಮಾನಿಸಲಾಗಿದೆ. ಇತರ ಜಿಲ್ಲೆಗಳಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಕ್ರಮ ಕೈಗೊಳ್ಳಲು ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಇನ್ನಷ್ಟು ಸುದ್ದಿಗಳು…
ತಾಯಿಯೇ ಮಗನಿಗೆ ಮೋಸ ಮಾಡಿದಾಗ ಮಗ ಅನಾಥನಾಗಿದ್ದ | ಬಿಜೆಪಿ ಸೇರ್ಪಡೆಗೆ ಎನ್.ಮಹೇಶ್ ಪ್ರತಿಕ್ರಿಯೆ
“ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಕ್ರಿಯೆ ನಡೆಸುವುದು ಅತ್ಯಾಚಾರಕ್ಕೆ ಸಮ”
ಬಿಗ್ ನ್ಯೂಸ್: ರಾಜಕೀಯ ನಿವೃತ್ತಿ ಘೋಷಿಸಿದ ಸಂಸದ ಶ್ರೀನಿವಾಸ್ ಪ್ರಸಾದ್