ನೈಟ್ ಕರ್ಫ್ಯೂ ಉಲ್ಲಂಘಿಸಿದರೆ ಹುಷಾರ್… ಸಿಎಂ ಯಡಿಯೂರಪ್ಪ ಹೇಳಿದ್ದೇನು ಗೊತ್ತಾ? - Mahanayaka
7:27 PM Tuesday 10 - December 2024

ನೈಟ್ ಕರ್ಫ್ಯೂ ಉಲ್ಲಂಘಿಸಿದರೆ ಹುಷಾರ್… ಸಿಎಂ ಯಡಿಯೂರಪ್ಪ ಹೇಳಿದ್ದೇನು ಗೊತ್ತಾ?

yediyurappa
11/04/2021

ರಾಯಚೂರು: ಯಾರೂ ಕೂಡ ನೈಟ್ ಕರ್ಫ್ಯೂ ಉಲ್ಲಂಘನೆ ಮಾಡುವಂತಿಲ್ಲ. ನಿಯಮ ಉಲ್ಲಂಘಿಸಿದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕೊರೊನಾ ಹೆಚ್ಚಿರುವ ಸ್ಥಳಗಳಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹಾಗಾಗಿ ಕರ್ಫ್ಯೂ ಅನಿವಾರ್ಯವಾಗಿದೆ. ಸ್ವತ: ಪ್ರಧಾನಿ ಮೋದಿ ಕರೆ ಮಾಡಿ ಕೊರೊನಾ ನಿಯಂತ್ರಣದ ಬಗ್ಗೆ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಚರ್ಚಿಸಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.

ಕೊರೊನಾ ಲಸಿಕೆ ವಿಚಾರವಾಗಿ ಮಾತನಾಡಿದ ಸಿಎಂ, ಎಲ್ಲರೂ ಕೊರೊನಾ ಲಸಿಕೆ ಹಾಕಿಸಿಕೊಳ್ಳಬೇಕು. ಲಸಿಕೆ ಬಗ್ಗೆ ಯಾರೂ ಹೆದರುವ ಅಗತ್ಯವಿಲ್ಲ. ಪ್ರಧಾನಿ ಮೋದಿ ಅವರು ಎರಡು ಬಾರಿ ಲಸಿಕೆ ಪಡೆದಿದ್ದಾರೆ. ನಾನೂ ಕೂಡ ಲಸಿಕೆ ಹಾಕಿಸಿಕೊಂಡಿದ್ದೇನೆ. ಲಸಿಕೆ ಸುರಕ್ಷಿತವಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಇತ್ತೀಚಿನ ಸುದ್ದಿ