ನೀಲಗಿರಿ ಅರಣ್ಯಕ್ಕೆ ಬೆಂಕಿ: ಕಿಡಿಗೇಡಿಗಳ ಕೃತ್ಯದ ಶಂಕೆ
ಚಿಕ್ಕಮಗಳೂರು: ನೀಲಗಿರಿ ಅರಣ್ಯಕ್ಕೆ ಬೆಂಕಿ ಬಿದ್ದ ಪರಿಣಾಮ ನಿಲಗೀರಿ ಪ್ಲಾಂಟೇಷನ್ ಧಗಧಗ ಹೊತ್ತಿ ಉರಿದ ಘಟನೆ ಚಿಕ್ಕಮಗಳೂರು ತಾಲೂಕಿನ ಸಗನಿಪುರ ಗ್ರಾಮದ ಬಳಿ ನಡೆದಿದೆ.
ಕಿಡಿಗೇಡಿಗಳ ಕೃತ್ಯದಿಂದಾಗಿ ಅರಣ್ಯದಲ್ಲಿದ್ದ ಅತ್ಯಮೂಲ್ಯ ಸಸ್ಯ, ನೀಲಗಿರಿ ಮರಗಳು ಬೆಂಕಿಗಾಹುತಿಯಾಗಿವೆ. ಗಾಳಿ ಹಾಗೂ ಬಿಸಿಲಿನ ತಾಪಕ್ಕೆ ಬೆಂಕಿಯ ಜ್ವಾಲೆ ಮತ್ತಷ್ಟು ಹೆಚ್ಚಾಗಿದೆ.
ಅರಣ್ಯಕ್ಕೆ ಬೆಂಕಿ ಬಿದ್ದಿರುವ ಪರಿಣಾಮ ಸುಮಾರು ಅರ್ಧ ಕಿ.ಮೀ. ವರೆಗೂ ಹೊಗೆ ಆವರಿಸಿದೆ. ಅರಣ್ಯ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw