ಮೂವರು ವಿದ್ಯಾರ್ಥಿನಿಯರಿಗೆ, ನೀವು ಧರಿಸಿರುವ ಉಡುಪು ಕಳಚಿ ಎಂದ 50 ವರ್ಷದ ಪ್ರಾಂಶುಪಾಲ!
ರಾಜ್ ಗಢ: ಸಮವಸ್ತ್ರ ಧರಿಸದ ವಿದ್ಯಾರ್ಥಿನಿಯರ ಮೇಲೆ ರೇಗಾಡಿದ ಪ್ರಾಂಶುಪಾಲರೋರ್ವರು ಉಡುಪು ಕಳಚುವಂತೆ ವಿದ್ಯಾರ್ಥಿನಿಯರಿಗೆ ಸೂಚನೆ ನೀಡಿದ್ದು, ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ರಾಜಗಢ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಪ್ರಾಂಶುಪಾಲರ ವಿರುದ್ಧ ಪ್ರಕರಣ ದಾಖಲಾಗಿದೆ.
50 ವರ್ಷ ವಯಸ್ಸಿನ ಪ್ರಾಂಶುಪಾಲ ರಾಧೇಶ್ಯಾಮ್ ಮಾಳವೀಯ ಈ ರೀತಿಯ ಕೃತ್ಯ ಮೆರೆದವರಾಗಿದ್ದು, ಇವರ ವಿರುದ್ಧ ಮಾಚಲಪುರ ಪೊಲೀಸ್ ಠಾಣೆಯಲ್ಲಿ ಮೂವರು ಬಾಲಕಿಯರು ದೂರು ದಾಖಲಿಸಿದ್ದು, ಈ ದೂರಿನನ್ವಯ ಪೊಲೀಸರು ರಾಧೇಶ್ಯಾಮ್ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ.
ವಿದ್ಯಾರ್ಥಿನಿಯರು ಸಮವಸ್ತ್ರ ಹೊಲಿಸಿರಲಿಲ್ಲ. ಹಾಗಾಗಿ ಸೋಮವಾರದೊಳಗೆ ಸಮವಸ್ತ್ರ ಧರಿಸಿ ಬರುತ್ತೇವೆ ಎಂದು ಪ್ರಾಂಶುಪಾಲರಿಗೆ ಮನವಿ ಮಾಡಿಕೊಂಡಿದ್ದರು ಎನ್ನಲಾಗಿದೆ. ಆದರೆ, ಸಮವಸ್ತ್ರ ಹೊಲಿಸಲು ಸಾಧ್ಯವಾಗದಿದ್ದುದರಿಂದ ಬಣ್ಣದ ಬಟ್ಟೆ ಹಾಕಿಕೊಂಡು ಬಂದಿದ್ದರು ಎನ್ನಲಾಗಿದೆ. ಇದರಿಂದ ಕೋಪಗೊಂಡ ಪ್ರಾಂಶುಪಾಲ, ನೀವು ಧರಿಸಿರುವ ಬಟ್ಟೆಯನ್ನು ಕಳಚಿ ಎಂದು ಸೂಚನೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ನೀವು ಈ ರೀತಿಯ ಡ್ರಸ್ ಗಳನ್ನು ಹಾಕಿಕೊಂಡು ತರಗತಿಯಲ್ಲಿರುವ ಹುಡುಗರನ್ನು ಹಾಳು ಮಾಡುತ್ತಿದ್ದೀರಿ ಎಂದು ಪ್ರಾಂಶುಪಾಲ ಹೇಳುತ್ತಿರುವುದು ವೈರಲ್ ವಿಡಿಯೋದಲ್ಲಿ ಕಂಡು ಬಂದಿದೆ. ಇನ್ನೂ ಘಟನೆಗೆ ಸಂಬಂಧಿಸಿದಂತೆ ಪ್ರಾಂಶುಪಾಲ ವಿರುದ್ಧ ಪೋಕ್ಸೋ ಹಾಗೂ ಐಪಿಸಿ ಸೆಕ್ಷನ್ ಗಳಡಿಯಲ್ಲಿ ಕೇಸ್ ದಾಖಲಿಸಲಾಗಿದೆ ಎಂದು ಉಪರೀಕ್ಷಕ ಜಿತೇಂದ್ರ ಅಜ್ನಾರೆ ತಿಳಿಸಿದ್ದಾರೆ.
ಇನ್ನಷ್ಟು ಸುದ್ದಿಗಳು…
ಸೆಪ್ಟಂಬರ್ 27ರಂದು ಭಾರತ್ ಬಂದ್: ಕೇಂದ್ರ ಸರ್ಕಾರದ ವಿರುದ್ಧ ತೀವ್ರತೆ ಪಡೆದ ರೈತರ ಹೋರಾಟ
ವಿವಾದಿತ ಕೃಷಿ ಕಾಯ್ದೆ ವಾಪಸ್ ಪಡೆಯದಿದ್ದರೆ ಬಿಜೆಪಿ ವಿರುದ್ಧ ಪ್ರಚಾರ ಮಾಡುತ್ತೇವೆ | ರೈತ ನಾಯಕರಿಂದ ಎಚ್ಚರಿಕೆ
ಗಣೇಶೋತ್ಸವಕ್ಕೆ ಷರತ್ತು ಬದ್ಧ ಅವಕಾಶ | ಸಂಘಟಕರು ಈ ನಿಯಮಗಳನ್ನು ಪಾಲಿಸಲೇ ಬೇಕು!
ಹಾರ, ತುರಾಯಿ ಸನ್ಮಾನ ಪಡೆದ ಸಿಎಂ ಬಸವರಾಜ್ ಬೊಮ್ಮಾಯಿ! | ಆದೇಶ ಪಾಲಿಸಬೇಕಾದವರು ಯಾರು?