ನಿರಂತರ ಮಳೆಗೆ ವಾಲಿ ನಿಂತ ಕಟ್ಟಡ: ಯಾವುದೇ ಸಮಯದಲ್ಲಿ ಕಟ್ಟಡ ಕುಸಿಯುವ ಭೀತಿ
ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಕಟ್ಟಡ ಕುಸಿಯುವ ಭೀತಿ ಉಂಟಾಗಿದ್ದು, ಭಾರೀ ಮಳೆಯ ಕಾರಣ ಇಲ್ಲಿನ ಕಮಲ ನಗರದಲ್ಲಿರುವ ಮೂರು ಅಂತಸ್ತಿನ ಕಟ್ಟಡದ ಕೆಳಮಹಡಿ ಗೋಡೆ ಕುಸಿದಿದೆ. ಹೀಗಾಗಿ ಕಟ್ಟಡವು ವಾಲಿ ನಿಂತಿದೆ.
ಮಂಗಳವಾರ ರಾತ್ರಿ ಘಟನೆ ನಡೆದಿದೆ. ಸದ್ಯ ಕಟ್ಟಡ ವಾಲಿ ನಿಂತಿದ್ದು, ಯಾವುದೇ ಕ್ಷಣಗಳಲ್ಲಿ ಕುಸಿಯುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ರಾತ್ರಿ ಜೋರಾಗಿ ಶಬ್ದ ಕೇಳಿ ಬಂದಿದ್ದರಿಂದ ಸಮೀಪದ ನಿವಾಸಿಗಳು ಸ್ಥಳಕ್ಕೆ ಬಂದಿದ್ದಾರೆ.
ಇನ್ನೂ ಈ ಕಟ್ಟಡ ಪಕ್ಕದಲ್ಲಿಯೇ ಇರುವ ಇನ್ನೊಂದು ಕಟ್ಟಡಕ್ಕೆ ಸಮೀಪವೇ ಇದೆ. ಇನ್ನೊಂದು ಕಟ್ಟಡದ ಬದಿಗೆ ಈ ಕಟ್ಟಡ ವಾಲಿ ನಿಂತಿದ್ದು, ಇದರಿಂದಾಗಿ ಆತಂಕ ಇನ್ನಷ್ಟು ಹೆಚ್ಚಾಗಿದೆ. ಸಮೀಪದ ಕಟ್ಟದಕ್ಕೂ ಇದು ಹಾನಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ವಾಲಿ ನಿಂತಿದ್ದ ಕಟ್ಟಡದಲ್ಲಿದ್ದ ಕುಟುಂಬಸ್ಥರಿಗೆ ಸದ್ಯ ಉಳಿದು ಕೊಳ್ಳಲು ಸಮೀಪದ ವಸತಿ ಶಾಲೆಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿರುವ ಶಾಸಕ ಗೋಪಾಲಯ್ಯ, ಅಗತ್ಯ ಕ್ರಮ ಕೈಗೊಳ್ಳಲು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸ್ಥಳದಲ್ಲೇ ಬೀಡುಬಿಟ್ಟಿರುವ ಅಧಿಕಾರಿಗಳು ಮುಂದಿನ ಕಾರ್ಯಾಚರಣೆ ಕೈಗೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಇನ್ನಷ್ಟು ಸುದ್ದಿಗಳು…
SSLC ಪರೀಕ್ಷೆ ಪಾಸ್ ಆದ ವಿದ್ಯಾರ್ಥಿಗಳಿಗೆ 15 ಸಾವಿರ ರೂ. ಪ್ರೋತ್ಸಾಹ ಧನ
ಬಿಜೆಪಿ ಅಭ್ಯರ್ಥಿಗೆ ಸಿಕ್ಕಿದ್ದು ಕೇವಲ ಒಂದೇ ಮತ | ತನ್ನ ಕುಟುಂಬದ 5 ಮಂದಿಯೂ ಬಿಜೆಪಿಗೆ ವೋಟ್ ಹಾಕಲಿಲ್ಲ!
ಆರ್ ಸಿಬಿ ತಂಡದ ನಾಯಕ ಸ್ಥಾನಕ್ಕೆ ಕಣ್ಣೀರಿನ ವಿದಾಯ ಹೇಳಿದ ವಿರಾಟ್ ಕೊಹ್ಲಿ
ಬಾಲಕಿಗೆ ಹೆರಿಗೆಯಾದ ಬಳಿಕ ಬಾಲ್ಯ ವಿವಾಹ ಬಯಲಿಗೆ: ಬಾಲಕಿಯ ಪತಿ ಅರೆಸ್ಟ್
ಮಳೆ ನೀರಿನಲ್ಲಿ ಕೊಚ್ಚಿ ಹೋದ ಲಕ್ಷಾಂತರ ರೂಪಾಯಿಯ ಮೀನುಗಳು!
ತರಕಾರಿ ವ್ಯಾಪಾರಿಯ ಹನಿಟ್ರ್ಯಾಪ್: ಯುವತಿ ಸಹಿತ ಮೂವರು ಆರೋಪಿಗಳ ಅರೆಸ್ಟ್
ಅವಿದ್ಯಾವಂತರು ದೇಶಕ್ಕೆ ಹೊರೆ, ಅವರು ಉತ್ತಮ ನಾಗರಿಕನಾಗಲು ಹೇಗೆ ಸಾಧ್ಯ? | ಅಮಿತ್ ಶಾ