ಬಿಎಸ್ ಪಿಯ ಮೊದಲ ಮಹಿಳಾ ರಾಷ್ಟ್ರೀಯ ವಕ್ತಾರರಾಗಿ ನಿರ್ಭಯ ಪ್ರಕರಣದ ವಕೀಲೆ ಸೀಮಾ ಕುಶ್ವಾಹಾ ನೇಮಕ
ಲಕ್ನೋ: ಇತ್ತೀಚೆಗೆ ಬಿಎಸ್ ಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ನಿರ್ಭಯ ಪ್ರಕರಣದ ವಕೀಲೆ ಸೀಮಾ ಕುಶ್ವಾಹಾ ಅವರನ್ನು ಪಕ್ಷದ ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಿದ್ದು, ಈ ಮೂಲಕ ಅವರು ಬಿಎಸ್ ಪಿಯ ಮೊದಲ ಮಹಿಳಾ ವಕ್ತಾರರೆನಿಸಿಕೊಂಡಿದ್ದಾರೆ.
ಮಹಿಳೆಯರ ವಿರುದ್ಧದ ಪ್ರಕರಣಗಳ ವಿರುದ್ಧ ಹೋರಾಡುವಲ್ಲಿ ಮುಂಚಿಣಿಯಲ್ಲಿದ್ದ ಸೀಮಾ ಕುಶ್ವಾಹಾ ಅವರು, ಕೆಳ ನ್ಯಾಯಾಲಯಗಳಿಂದ ಸುಪ್ರೀಂ ಕೋರ್ಟ್ ವರೆಗೆ ಮಹಿಳೆಯರಿಗೆ ನ್ಯಾಯ ಒದಗಿಸಿಕೊಡುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿದ್ದರು.
ಬಿಎಸ್ ಪಿ ವರಿಷ್ಠೆ ಮಾಯಾವತಿ ಅವರು ಕುಶ್ವಾಹಾ ಅವರನ್ನು ಪಕ್ಷದ ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಿದ್ದಾರೆ. ಅವರು ಅಸಾಧಾರಣ ವಕೀಲೆ ಮಾತ್ರವಲ್ಲ ಸಮಾಜ ಸೇವೆಯನ್ನೂ ಮಾಡುತ್ತಿದ್ದಾರೆ. ಅವರು ಪಶ್ಚಿಮ ಉತ್ತರ ಪ್ರದೇಶ, ಇಟಾವಾ ಮತ್ತು ಬುಂದೇಲ್ ಖಂಡದಲ್ಲಿ ಮೌರ್ಯ, ಶಾಕ್ಯ ಮತ್ತು ಕುಶ್ವಹಾ ಸಮುದಾಯಗಳಲ್ಲಿ ಉತ್ತಮ ಪ್ರಭಾವ ಹೊಂದಿದ್ದಾರೆ. ಆದ್ದರಿಂದ ಭವಿಷ್ಯದಲ್ಲಿ ಸೀಮಾ ಕುಶ್ವಾಹಾ ದೊಡ್ಡ ಜವಾಬ್ದಾರಿಯನ್ನು ನೀಡಲಾಗುವುದು ಎಂದು ಪಕ್ಷದ ಮುಖಂಡರೊಬ್ಬರು ಮಾಹಿತಿ ನೀಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳಿಗೆ ಪಿ ಎಸ್ ಐ ಖಡಕ್ ಎಚ್ಚರಿಕೆ
ಗರ್ಭಿಣಿಯನ್ನು ಬೈಕ್ ನಲ್ಲಿ ಕರೆತಂದ ಪತಿ: ಆಸ್ಪತ್ರೆ ಮುಂಭಾಗದಲ್ಲೇ ಹೆರಿಗೆ
ಸೇನಾ ಸಮವಸ್ತ್ರ ಧರಿಸುವುದು ಶಿಕ್ಷಾರ್ಹ ಅಪರಾಧ: ಪ್ರಧಾನಿ ಮೋದಿಗೆ ಕೋರ್ಟ್ ನೋಟಿಸ್
ದಲಿತ ಯುವತಿಯನ್ನು ಮದುವೆಯಾಗಿದ್ದಕ್ಕೆ ಸ್ವಜಾತಿಯವರಿಂದಲೇ ಯುವಕನ ಕುಟುಂಬಕ್ಕೆ ಬಹಿಷ್ಕಾರ
ಕಾರಿಗೆ ಗುಂಡು ಹಾರಿಸಿ ಓವೈಸಿಯ ಹತ್ಯೆಗೆ ಯತ್ನ!