ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕೆ.ವಿ.ರಾಜು ಇನ್ನಿಲ್ಲ
ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕೆ.ವಿ.ರಾಜು ಶುಕ್ರವಾರ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಕೆ.ವಿ’ರಾಜು ಅವರು ಕೆಲವು ದಿನಗಳಿಂದ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೆ ರಾಜಾಜಿನಗರದ ನಿವಾಸದಲ್ಲಿ ಬೆಳಗ್ಗೆ 8 ಗಂಟೆಗೆ ಸುಮಾರಿಗೆ ವಿಧಿವಶರಾಗಿದ್ದಾರೆ.
ರಾಜಾಜಿನಗರದ ನಿವಾಸದಲ್ಲಿ ಕೆ.ವಿ.ರಾಜು ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಹರಿಶ್ಚಂದ್ರ ಘಾಟ್ ನಲ್ಲಿ ಅಂತ್ಯ ಸಂಸ್ಕಾರ ಮಾಡಲಾಗುತ್ತದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.
ಕೆ.ವಿ.ರಾಜು ಅವರು ಹುಲಿಯಾ, ಬೆಳ್ಳಿ ಮೋಡ, ಇಂದ್ರಜಿತ್, ಬೆಳ್ಳಿ ಕಾಲುಂಗುರ, ಯುದ್ಧಕಾಂಡ ಸೇರಿ ಹಲವು ಚಿತ್ರಗಳನ್ನು ನಿರ್ದೇಶಿಸಿದ್ದರು. ಅಲ್ಲದೆ ಬಾಲಿವುಡ್ ನಲ್ಲಿ ಅಮಿತಾಬ್ ಬಚ್ಚನ್ ಅಭಿನಯದ ಚಿತ್ರವನ್ನೂ ಅವರು ನಿರ್ದೇಶಿಸಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ನನ್ನ ಕೆಲಸ ಬೆಣ್ಣೆ ಹಚ್ಚುವುದಲ್ಲ: ರವಿಚಂದ್ರನ್ ಅಶ್ವಿನ್ ಗೆ ರವಿಶಾಸ್ತ್ರಿ ತಿರುಗೇಟು
ಕೊವಿಡ್ ಸೋಂಕಿಗೊಳಗಾದ ಪುರುಷರಲ್ಲಿ ವೀರ್ಯಾಣುಗಳ ಸಂಖ್ಯೆ ಮತ್ತು ಚಲನಶೀಲತೆ ಕುಸಿತ!
ಜಮ್ಮು-ಕಾಶ್ಮೀರದ ಅನಂತ್ ನಾಗ್‌ನಲ್ಲಿ ಎನ್ ಕೌಂಟರ್: ಓರ್ವ ಉಗ್ರನ ಹತ್ಯೆ
ಮೀನುಗಾರನನ್ನು ತಲೆಕೆಳಗಾಗಿ ನೇತು ಹಾಕಿ ಹಲ್ಲೆ: ಆರು ಮಂದಿ ಆರೋಪಿಗಳು ಅರೆಸ್ಟ್
22 ವರ್ಷವಾಗದೆ ಹೆಣ್ಣು ಮಕ್ಕಳಿಗೆ ಮದುವೆ ಮಾಡಿಸಬಾರದು | ಶೋಭಾ ಕರಂದ್ಲಾಜೆ