ನಿರ್ಮಾಪಕ ಉಮಾಪತಿ ಕೊಲೆಯತ್ನ ಪ್ರಕರಣ: ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಸೆರೆ

arrest
23/01/2022

ಬೆಂಗಳೂರು: ನಿರ್ಮಾಪಕ ಉಮಾಪತಿ ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ 16 ಹಾಗೂ 17ನೇ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ದರ್ಶನ್ ಹಾಗೂ ಸಂಜು ಎಂಬಾತನನ್ನು ಬಂಧಿಸಿ ಹೆಚ್ಚಿನ ವಿಚಾರಣೆಗಾಗಿ ಸಿಸಿಬಿ ಜಯನಗರ ಠಾಣಾ ಪೊಲೀಸರಿಗೆ ಒಪ್ಪಿಸಲಾಗಿದೆ.

2020ರ ಡಿಸೆಂಬರ್​ನಲ್ಲಿ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿರ್ಮಾಪಕ ಉಮಾಪತಿ, ಸಹೋದರ ದೀಪಕ್, ರೌಡಿಶೀಟರ್ ಸೈಕಲ್ ರವಿ ಹತ್ಯೆಗೆ ಸಂಚು ರೂಪಿಸಿ ಮಾರಕಾಸ್ತ್ರ ಹಿಡಿದು 15ಕ್ಕಿಂತ ಹೆಚ್ಚು ಮಂದಿ ಪ್ಲ್ಯಾನ್ ಮಾಡಿಕೊಂಡಿದ್ದರು.

ಈ ಮಾಹಿತಿ ಹಿನ್ನೆಲೆಯಲ್ಲಿ ಅಂದಿನ ಜಯನಗರ ಪೊಲೀಸ್ ಠಾಣೆಯ ಇನ್​​ಸ್ಪೆಕ್ಟರ್ ಹರೀಶ್ ಕುಮಾರ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ 10ಕ್ಕಿಂತ ಹೆಚ್ಚು ಮಂದಿ ಆರೋಪಿಗಳನ್ನು ಬಂಧಿಸಿತ್ತು.

ಪ್ರಕರದಲ್ಲಿ ಭಾಗಿಯಾಗಿ ಹಲವು ತಿಂಗಳಿಂದ ಎಸ್ಕೇಪ್ ಆಗಿದ್ದ ಆರೋಪಿಗಳು ಸುಂಕದಕಟ್ಟೆ ಬಳಿ ಅಡಗಿಕೊಂಡಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಕಾರ್ಯಾಚರಣೆ ನಡೆಸಿ ಬಂಧಿಸಿದೆ‌.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬಿಜೆಪಿ ಸಂಸದರ ಮೇಲೆ ಕಲ್ಲು ತೂರಾಟ

ಪತ್ನಿಯನ್ನು ಚುಡಾಯಿಸುತ್ತಿದ್ದ ಯುವಕನನ್ನು ಬರ್ಬರ ಹತ್ಯೆಗೈದ ಪತಿ

ಬೆಂಗಳೂರು: ಬಾಲಕಿ ಮೇಲೆ ಅತ್ಯಾಚಾರ; ಆರೋಪಿಯ ಬಂಧನ

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಸ್ಥಳದಲ್ಲೇ ಸವಾರ ಸಾವು

ಇತ್ತೀಚಿನ ಸುದ್ದಿ

Exit mobile version