ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್, ಡಿಸಿಎಂ ಆಗಿ ತೇಜಸ್ವಿ ಯಾದವ್ ಪ್ರಮಾಣ ವಚನ
ಬಿಹಾರದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು. ಉಪ ಮುಖ್ಯಮಂತ್ರಿಯಾಗಿ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಪ್ರಮಾಣ ವಚನ ಸ್ವೀಕಾರ ಮಾಡಿದರು.
71 ವರ್ಷ ವಯಸ್ಸಿನ ನಿತೀಶ್ ಕುಮಾರ್ ಅವರು 8ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಚೌಹಾಣ್ ಪ್ರತಿಜ್ಞಾ ವಿಧಿ ಬೋಧಿಸಿದರು.
ಬಿಹಾರದಲ್ಲಿ ರಾಷ್ಟ್ರೀಯ ಪಕ್ಷಗಳನ್ನು ಹೊರಗಿಟ್ಟು ಪ್ರಾದೇಶಿಕ ಪಕ್ಷಗಳು, ಜೊತೆಯಾಗುವ ಮೂಲಕ ಹೊಸದೊಂದು ರಾಜಕೀಯ ಅಧ್ಯಾಯ ಆರಂಭವಾಗಿದೆ. ಆರ್ ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಎರಡನೇ ಬಾರಿಗೆ ಡಿಸಿಎಂ ಆಗಿದ್ದಾರೆ.
ಬಿಜೆಪಿ ಜೊತೆಗಿನ ಮೈತ್ರಿ ಕಡಿದುಕೊಂಡ ನಿತೀಶ್ ಕುಮಾರ್ ನಿನ್ನೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಜೆಡಿಯು ವಿರುದ್ಧದ ಒಳಸಂಚು ಮೈತ್ರಿ ಕಡಿದುಕೊಳ್ಳಲು ಕಾರಣ ಎಂದು ನಿತೀಶ್ ಕುಮಾರ್ ರಾಜೀನಾಮೆ ಬಳಿಕ ಹೇಳಿಕೆ ನೀಡಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka